ಕುಂಬ್ರ: ಸಹಕಾರಿ ಸಂಘಗಳಲ್ಲಿ ಅತ್ಯಂತ ಪ್ರತಿಷ್ಠೆಯ ಕಣವಾಗಿದ್ದ ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ 12 ಕ್ಕೆ 12 ಸ್ಥಾನಗಳಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಅಭೂತಪೂರ್ವ ಗೆಲವು ಸಾದಿಸುವ ಮೂಲಕ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಈ ಮೂಲಕ ಮುಂಡೂರು ಪ್ರಾಥಮಿಕ ಸಹಕಾರಿ ಸಂಘದ ಫಲಿತಾಂಶಕ್ಕೆ ಟಕ್ಕರ್ ಕೊಡುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.