• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಗತ್ತಿನಾದ್ಯಂತ ಮುಂದಿನ 5 ವರ್ಷದಲ್ಲಿ 9.2 ಕೋಟಿ ಉದ್ಯೋಗ ನಷ್ಟ: ವಿಶ್ವ ಆರ್ಥಿಕ ವೇದಿಕೆ ವರದಿ

January 10, 2025
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಜಗತ್ತಿನಾದ್ಯಂತ ಮುಂದಿನ 5 ವರ್ಷದಲ್ಲಿ 9.2 ಕೋಟಿ ಉದ್ಯೋಗ ನಷ್ಟ: ವಿಶ್ವ ಆರ್ಥಿಕ ವೇದಿಕೆ ವರದಿ

ಮುಂದಿನ ಐದು ವರ್ಷಗಳಲ್ಲಿ ಜಗತ್ತಿನಾದ್ಯಂತ ಹೊಸದಾಗಿ 17 ಕೋಟಿ ಉದ್ಯೋಗಗಳು ಸೃಷ್ಟಿ

by ಪ್ರಜಾಧ್ವನಿ ನ್ಯೂಸ್
January 10, 2025
in ಅಂತರಾಷ್ಟ್ರೀಯ, ಉದ್ಯೋಗ - ಶಿಕ್ಷಣ
0
ಜಗತ್ತಿನಾದ್ಯಂತ ಮುಂದಿನ 5 ವರ್ಷದಲ್ಲಿ 9.2 ಕೋಟಿ ಉದ್ಯೋಗ ನಷ್ಟ: ವಿಶ್ವ ಆರ್ಥಿಕ ವೇದಿಕೆ ವರದಿ
6
SHARES
16
VIEWS
ShareShareShare

ಹೊಸದಿಲ್ಲಿ: ಮುಂದಿನ ಐದು ವರ್ಷಗಳಲ್ಲಿ ಜಗತ್ತಿನಾದ್ಯಂತ ಹೊಸದಾಗಿ 17 ಕೋಟಿ ಉದ್ಯೋಗಗಳು ಸೃಷ್ಟಿಯಾಗಲಿವೆ. ಆದರೆ, ಇದೇ ಅವಧಿಯಲ್ಲಿ 9.2 ಕೋಟಿ ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಒಟ್ಟಾರೆ ಹೊಸದಾಗಿ 7.8 ಕೋಟಿ ಉದ್ಯೋಗಗಳಷ್ಟೇ ಸೃಷ್ಟಿಯಾದಂತೆ ಆಗುತ್ತದೆ ಎಂದು ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್‌ ) ವರದಿ ತಿಳಿಸಿದೆ. ದಾವೋಸ್‌ನಲ್ಲಿ ಇದೇ 20ರಿಂದ 25ರ ವರೆಗೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಗೂ ಮೊದಲೇ ಬುಧವಾರ ವರದಿ ಬಿಡುಗಡೆಯಾಗಿದೆ.

2030ರ ವೇಳೆಗೆ ವಿಶ್ವದಲ್ಲಿ ಕೃಷಿ ಕಾರ್ಮಿಕರು ಮತ್ತು ಚಾಲಕರ ಹುದ್ದೆಗಳ ನೇಮಕಾತಿ ಪ್ರಮಾಣ ಏರಿಕೆಯಾಗಲಿದೆ. ಆದರೆ, ಇದೇ ಅವಧಿಯಲ್ಲಿ ಕ್ಯಾಷಿಯರ್‌ ಮತ್ತು ಟಿಕೆಟ್‌ ಬುಕಿಂಗ್‌ ಕ್ಷೇತ್ರ ಸೇರಿ ಇತರೆ ವಲಯಗಳಲ್ಲಿ ಉದ್ಯೋಗಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ವಿವರಿಸಿದೆ.

ಜಾಗತಿಕ ಮಟ್ಟದಲ್ಲಿ ಅಗಾಧ ಪ್ರಮಾಣದಲ್ಲಿ ತಂತ್ರಜ್ಞಾನ ಬದಲಾಗುತ್ತಿದೆ. ಜಾಗತಿಕ ಬಿಕ್ಕಟ್ಟು ಉಲ್ಬಣಿಸಿದೆ. ಇದರಿಂದ ಆರ್ಥಿಕ ಬೆಳವಣಿಗೆಯು ಒತ್ತಡಕ್ಕೆ ಸಿಲುಕಿದೆ. ಹಾಗಾಗಿ, ಕೈಗಾರಿಕೆಗಳು ಮತ್ತು ವೃತ್ತಿಪರ ವಲಯಗಳಲ್ಲಿ ಉದ್ಯೋಗಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ಹೇಳಿದೆ. ಒಂದು ಸಾವಿರಕ್ಕೂ ಹೆಚ್ಚು ಕಂಪನಿಗಳ ದತ್ತಾಂಶ ಕ್ರೋಢೀಕರಿಸಿ ಈ ವರದಿ ಸಿದ್ಧಪಡಿಸಲಾಗಿದೆ. ವ್ಯಾಪಾರ ವಿನಿಮಯದ ಹಾದಿಯಲ್ಲಿ ಉದ್ಯೋಗಿಗಳಲ್ಲಿ ಕೌಶಲ ಕೊರತೆ ಇರುವುದು ಈ ಅಧ್ಯಯನದಲ್ಲಿ ಕಂಡುಬಂದಿದೆ ಎಂದು ಹೇಳಿದೆ.

ಕೃತಕ ಬುದ್ಧಿಮತ್ತೆ AI, ದತ್ತಾಂಶ ಸಂಗ್ರಹ ಮತ್ತು ಸೈಬರ್‌ ಭದ್ರತಾ ವಲಯವು ವೇಗವಾಗಿ ಬೆಳವಣಿಗೆ ಸಾಧಿಸಲಿದೆ. ಮಾನವ ಕೌಶಲದಲ್ಲಿನ ಕೊರತೆಯು ಮುಂದುವರಿಯಲಿದೆ. ಆದರೆ, ಉದ್ಯೋಗ ಮಾರುಕಟ್ಟೆಯ ಬದಲಾವಣೆಯಲ್ಲಿ ತಂತ್ರಜ್ಞಾನ ಹಾಗೂ ಮಾನವ ಕೌಶಲವು ನಿರ್ಣಾಯಕವಾಗಿದೆ ಎಂದು ತಿಳಿಸಿದೆ. ಆರೈಕೆ ಮತ್ತು ಶಿಕ್ಷಣ ವಲಯದಲ್ಲಿ ಅತಿ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ಕೃತಕ ಬುದ್ಧಿಮತ್ತೆ ಮತ್ತು ನವೀಕರಿಸಬಹುದಾದ ಇಂಧನ ವಲಯದಲ್ಲಿ ಉದ್ಯೋಗಾವಕಾಶ ಹೆಚ್ಚಲಿದೆ ಎಂದು ವರದಿ ತಿಳಿಸಿದೆ.

ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳು ಕೃತಕ ಬುದ್ಧಿಮತ್ತೆ (ಎಐ), ಇಂಧನ ತಂತ್ರಜ್ಞಾನ, ರೊಬೊಟಿಕ್ಸ್‌ ಮತ್ತು ಅವಲಂಬನೆಯನ್ನು ನಿವಾರಿಸುವ ಸ್ವಾಯತ್ತ ವ್ಯವಸ್ಥೆಗಳ ಮೇಲೆ ಭಾರಿ ಹೂಡಿಕೆ ಮಾಡುತ್ತಿವೆ. ಇದಕ್ಕೆ ಜಾಗತಿಕವಾಗಿ ಹೊಂದಿಕೆಯಾಗುವ ಪ್ರಮಾಣವನ್ನು ಮೀರಿ ಮುನ್ನಡೆಯಲು ಉದ್ಯೋಗದಾತರು ಯೋಜಿಸುತ್ತಿದ್ದಾರೆ ಎಂದು ವಿಶ್ವ ಆರ್ಥಿಕ ವೇದಿಕೆ ವರದಿಯು ಭಾರತದಲ್ಲಿ ಉದ್ಯಮಶೀಲತೆಯ ನಡೆಯನ್ನು ವಿಶ್ಲೇಷಿಸಿದೆ.

ಭಾರತದಲ್ಲಿ ಶೇ. 35ಕ್ಕೂ ಹೆಚ್ಚು ಉದ್ಯೋಗದಾತರು ಸೆಮಿಕಂಡಕ್ಟರ್‌ ಮತ್ತು ಕಂಪ್ಯೂಟಿಂಗ್‌ ತಂತ್ರಜ್ಞಾನದಿಂದ ತಮ್ಮ ನಿತ್ಯದ ಕಾರ್ಯಗಳ ರೀತಿ ಬದಲಾಗುತ್ತದೆ ಎಂದು ದೃಢವಾಗಿ ನಂಬಿದ್ದಾರೆ. ಶೇ. 21ರಷ್ಟು ಉದ್ಯೋಗದಾತರು ಕ್ವಾಂಟಮ್‌, ಮತ್ತು ಗೂಢಲಿಪೀಕರಣ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರಿಂದ ತಮ್ಮ ಕಾರ್ಯ ರೀತಿ ರೂಪಾಂತರಗೊಳ್ಳುತ್ತದೆ ಎಂದು ನಂಬಿದ್ದಾರೆ. ಇಂಥ ನಂಬಿಕೆ ಜಾಗತಿಕ ಸರಾಸರಿಗಿಂತಲೂ ಭಾರತದಲ್ಲಿ ಹೆಚ್ಚಿದೆ ಎಂದು ವರದಿ ಹೇಳಿದೆ.

ಪದವಿಗಿಂತಲೂ ಅಭ್ಯರ್ಥಿಗಳ ಕೌಶಲ್ಯಗಳನ್ನು ಆಧರಿಸಿ ನೇಮಕ ಮಾಡಿಕೊಳ್ಳುವ ನಿರೀಕ್ಷೆ ಇದೆ. ಎಐ ಕುಶಲಿಗಳಿಗೆ ಜಾಗತಿಕವಾಗಿ ಬೇಡಿಕೆ ಹೆಚ್ಚಿದೆ. ಈ ವಿಷಯದಲ್ಲಿ ಭಾರತ ಮತ್ತು ಅಮೆರಿಕ ಮುಂದಿವೆ. ಭಾರತದಲ್ಲಿ ಕಾರ್ಪೊರೇಟ್‌ ಪ್ರಾಯೋಜಕತ್ವವು ಜೆನ್‌ ಎಐ ತರಬೇತಿಯನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ವರದಿಯು ತಿಳಿಸಿದೆ.

ಜಾಹೀರಾತು

8722552464 Astrloger

ಜಾಹೀರಾತು

SendShare2Share
Previous Post

ನಾನೇನೂ ದೇವರಲ್ಲ, ನಾನು ಕೂಡ ತಪ್ಪು ಮಾಡಿದ್ದೇನೆ: ಕನ್ನಡಿಗನ ಪಾಡ್‌ಕಾಸ್ಟ್‌ನಲ್ಲಿ ಪ್ರಧಾನಿ

Next Post

ಮುಂಡೂರು ಗ್ರಾಮದಲ್ಲಿ ಪುತ್ತೂರು ತಾಲೂಕು ಕ್ರೀಡಾಂಗಣ: 20 ಕೋಟಿ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In