ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಬಳಿ ಅಕ್ರಮ ದನ ಸಾಗಾಟದ ವಾಹನವೊಂದನ್ನು ಪೊಲೀಸರು ತಡೆಹಿಡಿದಿದ್ದು ವಾಹನ ಬಿಟ್ಟು ಚಾಲಕ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.
ಈ ಘಟನೆ ಜ.14 ಮುಂಜಾನೆ ನಡೆದಿದ್ದು ಸ್ಥಳದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದಾರೆ. ಪಿಕಾಪ್ ವಾಹನದಲ್ಲಿ ಸುಮಾರು ಎಂಟು ಜಾನುವಾರುಗಳಿದ್ದು ಒಂದು ದನ ಮೃತಪಟ್ಟಿರುವುದಾಗಿ ಮಾಹಿತಿ ಲಭಿಸಿದೆ.
ಈ ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಹಗ್ಗದಿಂದ ಕಟ್ಟಿರುವುದು ವೀಡಿಯೋಗಳ ಮೂಲಕ ದೃಢವಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಲ್ಲದೆ ಅಕ್ರಮ ಜಾನುವಾರು ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದು ಠಾಣೆಗೆ ಕೊಂಡೊಯ್ದಿದ್ದಾರೆ.