ಮಧುಗಿರಿ: ದೂರು ನೀಡಲು ಬಂದಿದ್ದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಜೈಲು ಸೇರಿದ್ದ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರಿಗೆ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆದರೆ ಮತ್ತೊಬ್ಬ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶನಿವಾರ ಮತ್ತೆ ಡಿವೈಎಸ್‌ಪಿ ಅವರನ್ನು ಮಧುಗಿರಿ ಪೊಲೀಸರು ಬಂಧಿಸಿದ್ದಾರೆ.
ದೂರು ನೀಡಲು ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಜೈಲು ಸೇರಿದ್ದ ಡಿವೈಎಸ್‌ಪಿ ಎ.ರಾಮಚಂದ್ರಪ್ಪಗೆ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆದರೆ, ಮತ್ತೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮತ್ತೆ ಡಿವೈಎಸ್‌ಪಿಯನ್ನು ಮಧುಗಿರಿ ಪೊಲೀಸರು ಬಂಧಿಸಿ ತುಮಕೂರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ಅವರನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ
ದೂರು ನೀಡಲು ಡಿವೈಎಸ್‌ಪಿ ಕಚೇರಿಗೆ ಬಂದಿದ್ದ ಮಹಿಳೆಯ ಮೇಲೆ ಕಚೇರಿಯಲ್ಲಿಯೇ ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಪೊಲೀಸರು ಬಂಧಿಸಿದ್ದರು.
ಈ ಪ್ರಕರಣದಲ್ಲಿ ನ್ಯಾಯಾಧೀಶ ಕೆ.ಯಾದವ್ ಅವರು ಡಿವೈಎಸ್‌ಪಿ ಎ.ರಾಮಚಂದ್ರಪ್ಪಗೆ 2 ಲಕ್ಷ ಮೌಲ್ಯದ ಬಾಂಡ್, ಇಬ್ಬರ ಜಾಮೀನು ಮತ್ತಿತರೆ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದ್ದರು. ಎಲ್ಲ ಷರತ್ತುಗಳೊಂದಿಗೆ ಬಿಡುಗಡೆಯಾದ ತಕ್ಷಣವೇ ಮಧುಗಿರಿ ಪೊಲೀಸರು ಮತ್ತೊಂದು ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಬಂಧಿಸಿದರು. ಡಿವೈಎಸ್‌ಪಿಯನ್ನು ಮಧುಗಿರಿ ಕಾರಾಗೃಹದಲ್ಲಿಡಲಾಗಿದೆ.