ರಾಜ್ಯದಲ್ಲಿ ಮೈಕ್ರೋ ಪೈನಾನ್ಸ್‌ಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಬಡವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲಿ ಸಾಲ ಪಡೆದು ಮರು ಪಾವತಿ ಮಾಡಲಾಗದೇ ಎಷ್ಟೋ ಜನ ಸಾವನ್ನಪ್ಪಿದ್ದಾರೆ. ನಿನ್ನೆ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಮಮನಗರ ತಾಲೂಕಿನ ತಿಮ್ಮಯ್ಯನದೊಡ್ಡಿ ಗ್ರಾಮದ ಮಹಿಳೆಯೊರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಳವಾಗುತ್ತಿದೆ. ಯಾರು ಅದರಲ್ಲಿ ಸಿಕ್ಕಿಹಾಕಿಕೊಂಡಿದ್ರೆ ನ್ಯಾಯ ಕೊಡಿಸುತ್ತೇವೆ. ಸಾರ್ವಜನಿಕರು ದೂರು ನೀಡಿದ್ರೆ ಕ್ರಮ ಕೈಗೊಳ್ಳುತ್ತೇವೆ. ತಿಪಟೂರಿನಲ್ಲಿನ ಮಹಿಳೆ ಸಾವಿಗೆ ಈಗಾಗಲೇ ಕ್ರಮ ಆಗಿದೆ. ಈಡೀ ರಾಜ್ಯದಲ್ಲಿ ಆ ರೀತಿಯ ಘಟನೆ ಆಗದಂತೆ ತಡೆಯಬೇಕಾಗಿದೆ. ಪೊಲೀಸ್ ಇಲಾಖೆಗೆ ದೂರು ಬಂದಾಗ ಮಾತ್ರ ಕ್ರಮ ಕೈಗೊಳ್ಳುತ್ತಾರೆ. ಮೈಕ್ರೋ ಫೈನಾನ್ಸ್ ನಡೆಸಲು ಸಾಕಷ್ಟು ಗೈಡಲೈನ್ಸ್ ಗಳಿವೆ ಎಂದು ಹೇಳಿದರು.