ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ಇದಾಗಿದ್ದು ಪ್ರಸಾದ್ ಅತ್ತಾವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆ ನೇತೃತ್ವದಲ್ಲಿ ದಾಳಿ ನಡೆಸಿದೆ. ಮಸಾಜ್ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ ಕೇಳಿಬಂದಿದೆ.
ಮಸಾಜ್ ಸೆಂಟರ್ ಗೆ ದಾಳಿ ನಡೆಸಿ ಪೀಠೋಪಕರಣ ಧ್ವಂಸಗೊಳಿಸಿದ್ದು ಮಸಾಜ್ ಸೆಂಟರ್ ನ ಗಾಜುಗಳನ್ನು ಪುಡಿಗೈದು ರಾಮಸೇನಾ ಆಕ್ರೋಶ ಹೊರಹಾಕಿದ್ದಾರೆ. ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಹೆಸರಿನ ಮಸಾಜ್ ಪಾರ್ಲರ್ ಗೆ ದಾಳಿ ನಡೆಸಿದ್ದು ಮಂಗಳೂರು ನಗರದಾದ್ಯಂತ ಇರೋ ಮಸಾಜ್ ಸೆಂಟರ್ ಗಳ ಮುಚ್ಚುವಂತೆ ರಾಮ ಸೇನಾ ಆಗ್ರಹಿಸಿದೆ .
ದಾಳಿ ಮಾಡಿದ್ದವರನ್ನು ತಕ್ಷಣ ಬಂಧಿಸುವಂತೆ ಜಿ.ಪರಮೇಶ್ವರ್ ಸೂಚನೆ
ಘಟನೆ ಬಗ್ಗೆ ಉಡುಪಿಯಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ದಾಳಿ ಮಾಡಿದ್ದವರನ್ನು ತಕ್ಷಣ ಬಂಧಿಸಲು ನಾನು ಸೂಚಿಸಿದ್ದೇನೆ. ಯಾವ ಉದ್ದೇಶಕ್ಕೆ ದಾಳಿಯಾಗಿದೆ ಗೊತ್ತಿಲ್ಲ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ. ಇಂತಹ ಕೃತ್ಯಗಳು ನಡೆಯಬಾರದು. ಯಾರಿಗೂ ವ್ಯಾಪಾರ ಮಾಡಿಕೊಳ್ಳುವುದಕ್ಕೆ ಅಡ್ಡಿಪಡಿಸಬಾರದು. ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.
ಜಯರಾಮ ಅಂಬೆಕಲ್ಲು ಸ್ಪಷ್ಟನೆ
ಘಟನೆ ಕುರಿತಾಗಿ ಶ್ರೀರಾಮಸೇನೆ ಸಂಘಟನೆ ಅಧ್ಯಕ್ಷ ಜಯರಾಮ ಅಂಬೆಕಲ್ಲು ಮಾತನಾಡಿದ್ದು, ಆ ದಾಳಿಗೂ ಶ್ರೀರಾಮಸೇನೆ ಸಂಘಟನೆಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ.
ರಾಮಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಪ್ರತಿಕ್ರಿಯಿಸಿದ್ದು, ನಮ್ಮ ರಾಮಸೇನೆ ಸಂಘಟನೆ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ‘ಮಸಾಜ್ ಸೆಂಟರ್ನಲ್ಲಿ ಡ್ರಗ್ಸ್ ನೀಡಿ ವೇಶ್ಯಾವಾಟಿಕೆ ನಡೆಸುತ್ತಿದ್ದರು’ 16, 17 ವರ್ಷದ ಹೆಣ್ಣುಮಕ್ಕಳನ್ನು ಬಳಸಿಕೊಳ್ತಿದ್ದರೆಂದು ಆರೋಪ ಮಾಡಿದ್ದಾರೆ. ನಮ್ಮ ಕಾರ್ಯಕರ್ತನ ಸಂಬಂಧಿ ಯುವತಿ ಇದರಲ್ಲಿ ಸಿಲುಕಿದ್ದಾಳೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದೇವೆ