ಪತ್ನಿಯ ಕಿರುಕುಳದಿಂದ ಬೆಂಗಳೂರಿನಲ್ಲಿ ಉತ್ತರ ಭಾರತ ಮೂಲದ ಪೀಟರ್ ಎನ್ನುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದ ಸುದ್ದಿ ದೇಶಾದ್ಯಂತ ಭಾರೀ ಚರ್ಚೆಯಾಗಿತ್ತು. ಹಾಗಿದ್ದರೂ ಇಂಥ ಪ್ರಕರಣ ವರದಿಯಾಗುವುದು ತಪ್ಪಿಲ್ಲ. ಹೆಂಡತಿಯ ಕಿರುಕುಳ ತಾಳಲಾರದೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪೀಟರ್ ಎಂದು ಗುರುತಿಸಲಾಗಿದೆ. ಅವರು ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಸಾವಿಗೂ ಮುನ್ನಡೆತ್‌ನೋಟ್ ಬರೆದಿಟ್ಟು ಪೀಟರ್ ಎನ್ನುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್‌ನಲ್ಲಿ ಅವರ ತಂದೆಯನ್ನು ನೆನಪಿಸಿಕೊಂಡಿರುವ ಪೀಟರ್, ಡ್ಯಾಡಿ ಐ ಆಯಮ್ ಸಾರಿ.. ಎಂದು ಬರೆದಿದ್ದಾರೆ. ಹೆಂಡತಿ ಪಿಂಕಿ ಇಸ್ ಕಿಲ್ಲಿಂಗ್ ಮೀ ಸೀ ವಾಂಟ್ ಮೈಡೆಥ್ (ನನ್ನ ಹೆಂಡತಿ ಪಿಂಕಿ ನನ್ನನ್ನು ಕೊಲ್ಲುತ್ತಿದ್ದಾಳೆ ಆಕೆ ನನ್ನ ಸಾವನ್ನು ನೋಡಬೇಕಂತೆ )ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೀಟರ್ ಪತ್ನಿ ಖಾಸಗಿ ಶಾಲೆ ಶಿಕ್ಷಕಿಯಾಗಿದ್ದರು. ಇತ್ತೀಚಿಗೆ ಬೇರೆ ವ್ಯಕ್ತಿ ಜೊತೆಗೆ ಸುತ್ತಾಟ ನಡೆಸುತ್ತಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ, ನನ್ನ ಜೀವನ ನನ್ನಿಷ್ಟ ಎಂದು ಉತ್ತರ ನೀಡಿದ್ದರು ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ
ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಪೀಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡತಿದ್ದ ಪೀಟರ್ ಹಾಗೂ ಆತನ ಪತ್ನಿ ಪಿಂಕಿ ನಡುವೆ ಕಳೆದ ಕೆಲವು ದಿನಗಳಿಂದ ಜಗಳ ನಡೆಯುತ್ತಿತ್ತು. ಹೆಂಡತಿ ಟಾರ್ಚರ್ ನಿಂದ ನಾನು ಸಾಯ್ತಿದಿನಿ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಪೀಟರ್ ಪತ್ನಿ ಪಿಂಕಿ ಕಿರಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದು, ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶವ ಪೆಟ್ಟಿಗೆ ಮೇಲೆ `ಹೆಂಡತಿ ಟಾರ್ಚರ್‍ನಿಂದ ಸಾವು’ ಎಂದು ಬರೆಸುವಂತೆ ಡೆತ್ ನೋಟ್ ಉಲ್ಲೇಖಿಸಲಾಗಿದೆ. ಪೀಟರ್ ಆಸೆಯಂತೆ ಶವ ಪೆಟ್ಟಿಗೆ ಮೇಲೆ `ಮೈ ಡೆತ್ ಬಿಕಾಸ್ ಆಫ್ ಮೈ ವೈಫ್ ಟಾರ್ಚರ್’ ಎಂದು ಕುಟುಂಬಸ್ಥರು ಬರೆಸಿಕೊಂಡಿದ್ದಾರೆ.