ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ತಮ್ಮದೇ ಒಂದು ಪ್ರತ್ಯೇಕ ಬಣವನ್ನು ಸೃಷ್ಟಿಸಿಕೊಂಡು, ರೆಬಲ್ ನಾಯಕರನ್ನು ಒಟ್ಟುಗೂಡಿಸಿಕೊಂಡು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ಗೆ ನೋಟಿಸ್ ನೀಡಲಾಗಿದೆ. ಹೈಕಮಾಂಡ್ ಸೂಚನೆಯಿಂತೆ ಬಿಜೆಪಿ ಶಿಸ್ತು ಸಮಿತಿಯಿಂದ ಯತ್ನಾಳ್‌ಗೆ ನೋಟಿಸ್ ನೀಡಲಾಗಿದೆ. ಬಿ ವೈ ವಿಜಯೇಂದ್ರ ಹಾಗೂ ಬಿ.ಎಸ್. ಯಡಿಯೂರಪ್ಪ ಮೇಲಿನ ಬಹಿರಂಗ ವಾಗ್ದಾಳಿ ಬಗ್ಗೆ ಖುದ್ದು ಹಾಜರಾಗಿ, ವಿವರಣೆ ನೀಡುವಂತೆ ನೋಟಿಸ್‌ನಲ್ಲಿ ಸೂಚನೆ ನೀಡಲಾಗಿದೆ. ನೋಟಿಸ್ ನೀಡಿದ 72 ಗಂಟೆಗಳ ಒಳಗೆ ಉತ್ತರ ಕೊಡಬೇಕು ಅಂತ ಯತ್ನಾಳ್‌ಗೆ ಸೂಚನೆ ನೀಡಲಾಗಿದೆ.