• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ

ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ

February 10, 2025
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

October 15, 2026
ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

October 15, 2026
ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

October 14, 2026
ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

October 13, 2026
ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

October 13, 2026
ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

October 13, 2026
ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

October 13, 2026
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

October 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ

by ಪ್ರಜಾಧ್ವನಿ ನ್ಯೂಸ್
February 10, 2025
in ಆರೋಗ್ಯ , ಹೆಲ್ತ್ ಟಿಪ್ಸ್, ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು, ರಾಜ್ಯ
0
ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ
202
SHARES
578
VIEWS
ShareShareShare

ಮಂಗಳೂರು: ಮಡಿಕೇರಿಯಲ್ಲಿ ನೆಲೆಸಿದ್ದ ವಲಸೆ ಕಾರ್ಮಿಕರ ಬಾಲಕನ ಎದೆಗೂಡಿನ ಭಾಗಕ್ಕೆ ಚುಚ್ಚಿಕೊಂಡಿದ್ದ ತೆಂಗಿನ ದಿಂಡು ಹಾಗೂ ಲೋಹದ ಸರವನ್ನು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದು ಪ್ರಾಣ ಉಳಿಸಿದ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯ ವೈದ್ಯರ ತಂಡದ ಕಾರ್ಯವೈಖರಿಯನ್ನು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಶ್ಲಾಘಿಸಿದ್ದಾರೆ.

ಅಸ್ಸಾಂ ಮೂಲದ 12 ವರ್ಷದ ಬಾಲಕ ಆಟವಾಡುತ್ತಿದ್ದ ವೇಳೆ ಅವಘಡ ಸಂಭವಿಸಿ ಎದೆಗೂಡಿಗೆ ತೆಂಗಿನ ದಿಂಡು ಹಾಗೂ ಲೋಹದ ಸರ ಸೇರಿಕೊಂಡಿತ್ತು. ವೆನ್ಲಾಕ್‌ಗೆ ಕರೆತರಲಾಗಿದ್ದ ಬಾಲಕನಿಗೆ ಕಾರ್ಡಿಯೋಥೋರಾಸಿಕ್​ ಮತ್ತು ವ್ಯಾಸ್​ಕ್ಯುಲರ್​ ಸರ್ಜರಿ ವಿಭಾಗದ ಡಾ. ಸುರೇಶ್‌ ಪೈ ನೇತೃತ್ವದ ತಂಡವು ಕೂಡಲೇ ಸಮಯಪ್ರಜ್ಞೆ ಮೆರೆದು ಬಹಳ ಸಂಕೀರ್ಣವಾದ ಮತ್ತು ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಆ ಮೂಲಕ ದೇಹ ಸೇರಿದ್ದ ಚುಚ್ಚಿಕೊಂಡಿದ್ದ ವಸ್ತುಗಳನ್ನು ಹೊರತೆಗೆದು ಬಾಲಕನ ಪ್ರಾಣ ಉಳಿಸಿದ್ದಾರೆ. ಇದು ವೆನ್ಲಾಕ್‌ನಂಥ ಸರ್ಕಾರಿ ವಲಯದ ಆಸ್ಪತ್ರೆಯಲ್ಲಿ ಲಭ್ಯವಿರುವ ಚಿಕಿತ್ಸಾ ಗುಣಮಟ್ಟ ಹಾಗೂ ಅಲ್ಲಿನ ನುರಿತ ವೈದ್ಯರ ಕಾರ್ಯಕ್ಷಮತೆಗೆ ಸಾಕ್ಷಿಯಾಗಿದೆ. ಹೀಗಿರುವಾಗ, ಈ ಅಪರೂಪದ ಹಾಗೂ ಸವಾಲಿನ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿ ಬಾಲಕನ ಜೀವ ಉಳಿಸುವಲ್ಲಿ ಕೈಜೋಡಿಸಿರುವ ವೆನ್ಲಾಕ್‌ನ ಇಡೀ ವೈದ್ಯರ ತಂಡ ಹಾಗೂ ಸಿಬ್ಬಂದಿ ವರ್ಗವನ್ನು ಅಭಿನಂದಿಸುವುದಾಗಿ ಕ್ಯಾ. ಚೌಟ ತಿಳಿಸಿದ್ದಾರೆ.

ಜಾಹೀರಾತು

ವೆನ್ಲಾಕ್‌ ಆಸ್ಪತ್ರೆ ವೈದ್ಯರ ಈ ಸಾಧನೆಯು ನಮ್ಮ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿರುವ ವೃತ್ತಿಪರರ ಕೌಶಲ್ಯ, ಸಮರ್ಪಣೆ ಮತ್ತು ಅಚಲ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಗಳನ್ನು ಹೆಚ್ಚು ದೂಷಿಸಲಾಗುತ್ತದೆ. ಆದರೆ ಈ ಪ್ರಕರಣವು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂದ ಮೇಲೆ ನಮ್ಮ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸಾ ಗುಣಮಟ್ಟದಲ್ಲಿ ಎಷ್ಟೊಂದು ಸುಧಾರಣೆಗಳು ಆಗುತ್ತಿವೆ ಎಂಬುದಕ್ಕೆ ಇಂಥಹ ಪ್ರಕರಣಗಳೇ ಸಾಕ್ಷಿ. ಅಷ್ಟೇ ಅಲ್ಲದೇ ವೆನ್ಲಾಕ್‌ ಆಸ್ಪತ್ರೆಯ ವೈದ್ಯರ ತುರ್ತು ಸ್ಪಂದನೆ ಹಾಗೂ ಸಮಯೋಚಿತ ನಿರ್ಧಾರವು ನಮ್ಮಲ್ಲಿರುವ ಇತರೆ ಸರ್ಕಾರಿ ಆಸ್ಪತ್ರೆಗಳಿಗೂ ಸ್ಪೂರ್ತಿಯಾಗಿದೆ ಎಂದು ಕ್ಯಾ. ಚೌಟ ಅಭಿಪ್ರಾಯಪಟ್ಟಿದ್ದಾರೆ.

LOTUS TRAVEL

ಜಾಹೀರಾತು

ವೆನ್ಲಾಕ್‌ ಆಸ್ಪತ್ರೆಯನ್ನು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಸುಮಾರು 90 ಕೋಟಿಗೂ ಅಧಿಕ ಮೊತ್ತ ಹಾಗೂ ಎಂ.ಆರ್.ಪಿ.ಎಲ್ ಸೇರಿದಂತೆ ವಿವಿಧ ಸಿಎಸ್‌ಆರ್ ನಿಧಿಯಡಿ ಹಂತ-ಹಂತವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯ 60 ಕೋಟಿ ಸುಮಾರಿನ ಅನುದಾನದಲ್ಲಿ ನಿರ್ಮಾಣಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೊಂಡಿತ್ತು ಹಾಗೂ ಕೇಂದ್ರ ಸರಕಾರದ ಪ್ರಧಾನಮಂತ್ರಿ ಆಯುಷ್ಮಾನ್‌ ಭಾರತ್‌ ಹೆಲ್ತ್‌ ಇನ್‌ಫ್ರಾಸ್ಟ್ರಕ್ಚರ್‌ ಮಿಷನ್‌-PMABHIM ಯೋಜನೆಯಡಿ ದ.ಕ. ಜಿಲ್ಲೆ ಒಟ್ಟು 25.11 ಕೋಟಿ ರೂ. ಬಿಡುಗಡೆಯಾಗಿತ್ತು. ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಹಾಗೂ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ ಕೇರ್ ಸೆಂಟರ್ನ 2ನೇ ಮಹಡಿಯಲ್ಲಿ ಜಿಲ್ಲಾ ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ (IPHL) ಕಟ್ಟಡ ನಿರ್ಮಾಣಕ್ಕೆ 1.11 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಇದರ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಘಟಕಗಳು ಕಾರ್ಯಾರಂಭಿಸಿದರೆ ವೆನ್ಲಾಕ್‌ನಲ್ಲಿ ಮತ್ತಷ್ಟು ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳು ಕರಾವಳಿ ಜನತೆಗೆ ದೊರೆಯಲಿದೆ.

ಇದಲ್ಲದೇ ಕ್ಯಾ.ಚೌಟ ಇತ್ತೀಚೆಗೆ ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕರ ಭೇಟಿ ಮಾಡಿ ವೆನ್ಲಾಕ್ ಗೆ ಸಿಎಸ್‌ಆರ್‍ ಫಂಡ್ ನಡಿ ಮತ್ತಷ್ಟು ಅನುದಾನ ನೀಡುವಂತೆ ಮನವಿ ಮಾಡಿದ್ದು ಸರ್ಕಾರಿ ಸಂಸ್ಥೆಗಳ ನಡುವಿನ ಇಂತಹ ಸಹಯೋಗಗಳು ಅತ್ಯಗತ್ಯ. ನಿರಂತರ ಹೂಡಿಕೆ ಮತ್ತು ಕಾರ್ಯತಂತ್ರದ ಪಾಲುದಾರಿಕೆಗಳೊಂದಿಗೆ, “ಮಂಗಳೂರು” ಆರೋಗ್ಯ ರಕ್ಷಣೆ ಮತ್ತು ಸೇವೆಯಲ್ಲಿ ಮಾದರಿ ನಗರವಾಗಿ ಹೊರಹೊಮ್ಮಬಹುದು, ಇದರಿಂದ ಲಕ್ಷಾಂತರ ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿದ್ದರು.

*ಬಾಕ್ಸ್:*

*ವೆನ್ಲಾಕ್ ಗೆ ರೀಜನಲ್ ಆಸ್ಪತ್ರೆ ಸ್ಥಾನ-ಮಾನ ನೀಡಲು ಆಗ್ರಹ*

ವೆನ್ಲಾಕ್ ಆಸ್ಪತ್ರೆಗೆ ಕೇಂದ್ರ ಸರ್ಕಾರದಿಂದ ಸೂಕ್ತ ಅನುದಾನ ಲಭ್ಯವಾಗುತ್ತಿದ್ದು, ರಾಜ್ಯದ ಮುಂಚೂಣಿಯ ಸುಸಜ್ಜಿತ ಸರ್ಕಾರಿ ಆಸ್ಪತ್ರೆಯಾಗಿ ಮಾರ್ಪಾಡಿಸುವುದಕ್ಕೆ ಹೆಚ್ಚಿನ ಚಿಕಿತ್ಸಾ ಸೌಲಭ್ಯ, ಮೂಲಸೌಕರ್ಯ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವೆನ್ಲಾಕ್‌ನಲ್ಲಿ ಮತ್ತಷ್ಟು ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳೊಂದಿಗೆ ಮಾದರಿ ಆಸ್ಪತ್ರೆಯಾಗಿ ಅಭಿವೃದ್ಧಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಅಲ್ಲದೆ, ವೆನ್ಲಾಕ್‌ಗೆ ದಕ್ಷಿಣ ಕನ್ನಡ, ಉಡುಪಿ ಮಾತ್ರವಲ್ಲದೇ ಸುತ್ತಮುತ್ತಲಿನ ಸುಮಾರು 7-8 ಜಿಲ್ಲೆಯ ರೋಗಿಗಳು ಚಿಕಿತ್ಸೆಗಾಗಿ ಅವಲಂಬಿಸಿಕೊಂಡಿದ್ದಾರೆ. ಆದರೆ ಸಿಬ್ಬಂದಿ ಕೊರತೆ ಸಹಿತ ಕೆಲವು ಸಮಸ್ಯೆಯನ್ನು ಈ ಜಿಲ್ಲಾಸ್ಪತ್ರೆ ಎದುರಿಸುತ್ತಿದ್ದು ಇವುಗಳನ್ನು ನಿವಾರಿಸಿ ಸಮಗ್ರ ಅಭಿವೃದ್ದಿ ಮಾಡುವುದಕ್ಕೆ ರಾಜ್ಯ ಸರ್ಕಾರದ ಸಹಕಾರ ಅತ್ಯಗತ್ಯ. ಈ ಹಿನ್ನಲೆಯಲ್ಲಿ ಮುಂದಿನ ರಾಜ್ಯ ಬಜೆಟ್‌ನಲ್ಲಿ ವೆನ್ಲಾಕ್ ನ್ನು ಪ್ರಾದೇಶಿಕ(ರಿಜನಲ್) ಆಸ್ಪತ್ರೆಯನ್ನಾಗಿ ಘೋಷಿಸಬೇಕು. ಜೊತೆಗೆ ಆಸ್ಪತ್ರೆಗೆ ಮತ್ತಷ್ಟು ಉನ್ನತ ಸ್ಥಾನಮಾನ ಒದಗಿಸಬೇಕು. ಪ್ರಾದೇಶಿಕ ಆಸ್ಪತ್ರೆ ಮಾನ್ಯತೆ ನೀಡುವುದರಿಂದ ಹೆಚ್ಚಿನ ಅನುದಾನ, ವೈದ್ಯಕೀಯ ಮೂಲಸೌಕರ್ಯ ಸುಧಾರಿಸುವ ಮೂಲಕ ಹೆಚ್ಚಿನ ಪ್ರದೇಶಕ್ಕೆ ಆರೋಗ್ಯ ಸೇವೆಗಳನ್ನು ವಿಸ್ತರಿಸಲು ಅನುಕೂಲವಾಗುತ್ತದೆ. ಈ ಸಂಬಂಧ ಕ್ಯಾ. ಚೌಟ ಅವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಕೂಡ ಬರೆದು ಒತ್ತಾಯಿಸಿದ್ದಾರೆ.

Rosemac bowlar

ಜಾಹೀರಾತು

SendShare81Share
Previous Post

ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

Next Post

ದರ್ಬೆತ್ತಡ್ಕ : ಬೆಟ್ಟಂಪಾಡಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಹಾಗೂ ಊರುದ ಗೊಬ್ಬುಲು ಸಾರ್ವಜನಿಕ ಕ್ರೀಡಾಕೂಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..