ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವತಿಯಿಂದ ವಾರ್ಷಿಕ ವಿಶೇಷ ಶಿಬಿರವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತ ಹಿರಿಯ ಪ್ರಾಥಮಿಕ ಶಾಲೆ ದರ್ಬೆತ್ತಡ್ಕ ಇಲ್ಲಿ ನಡೆಯುತ್ತಿದೆ. 07-02-2025 ಶುಕ್ರವಾರದಂದು ಆರಂಭಗೊಂಡ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನವಾದ 12.02.2025 ರ ಬುಧವಾರದಂದು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ತಿಂಗಳಾಡಿ ಇದರ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ಶಿಬಿರ ಹಾಗೂ ಶಿಬಿರಾರ್ಥಿಗಳಿಂದ ಸಾರ್ವಜನಿಕರಿಗೆ ಊರುದ ಗೊಬ್ಬುಲು ಕ್ರೀಡಾಕೂಟ ಮತ್ತು ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಶಿಬಿರಾಧಿಕಾರಿಗಳು ಈ ಮೂಲಕ ತಿಳಿಸಿದ್ದಾರೆ.
























