ಪುತ್ತೂರು:ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಮತ್ತು ಅತ್ತೆಜಾಲು ಸ್ಥಳದಲ್ಲಿ ಅತೀ ಪುರಾತನವಾಗಿ ಆರಾಧಿಸಿಕೊಂಡು ಬಂದಿರತಕ್ಕಂತಹ ಭಂಡಾರದ ಮನೆ ಮತ್ತು ದೈವಗಳ ಗುಡಿಮಾಡಗಳು ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ಪ್ರಕಾರ ಜೀರ್ಣೋದ್ಧಾರಗೊಂಡು, ಫೆ. 21ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ
ಸಪರಿವಾರ ಶ್ರೀ ವ್ಯಾಘ್ರ ಚಾಮುಂಡಿ, ಉಳ್ಳಾಕ್ಲು, ಕೊರತಿದೈವ ಮತ್ತು ಗುಳಿಗ ದೈವ ಹಾಗೂ ನಾಗ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು.
ಬೆಳಿಗ್ಗೆ ದೇವತಾಪ್ರಾರ್ಥನೆ, ಆಚಾರ್ಯವರಣೆ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ,ಸಾನಿಧ್ಯ ಕಲಶ ಪೂಜೆ, ಕಲಶಾಭಿಷೇಕ, ತಂಬಿಲ ಸೇವೆ, ನಾಗಬನದಲ್ಲಿ ತಂಬಿಲ ಸೇವೆ, ಮಂಗಳಾರತಿ, ಮಧ್ಯಾಹ್ನ ಪ್ರಸಾದ ವಿತರಣೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ, ಅಧ್ಯಕ್ಷ ಕಿರಣ್ ಶೆಟ್ಟಿ ಮುಂಡವಿನಕೋಡಿ ಪೆರ್ನೆರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.