ಪುತ್ತೂರು : ದಿನಾಂಕ 22-3-2025 ರಂದು ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಆವರಣದಲ್ಲಿ ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ ಹಾಗೂ ಸ್ನಾತಕ ವಿಭಾಗಗಳ ಷಷ್ಟ್ಯಬ್ದವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇದರೊಂದಿಗೆ ಕಾಲೇಜಿನ ವಿದ್ಯಾರ್ಥಿ ಸಂಘದ ದಿನಾಚರಣೆ ‘ಸಪ್ತಪರ್ಣೋತ್ಸವ’ ಹಾಗೂ ಕಾಲೇಜು ವಾರ್ಷಿಕೋತ್ಸವವು ಕೂಡಾ ಜರುಗಲಿರುವುದು.
ಉದ್ಘಾಟನಾ ಸಮಾರಂಭ:
ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ ಕಾಠ್ಯಕ್ರಮದ ಉದ್ಘಾಟನೆಯನ್ನು ಡಾ.ಸುಕಾಂತ ಮಜುಂದಾರ್, ಕೇಂದ್ರ ಶಿಕ್ಷಣ ಸಚಿವರು, ರಾಜ್ಯ ಖಾತೆ ಭಾರತ ಸರಕಾರ ಇವರು ನೆರವೇರಿಸಲಿದ್ದು, ಮುಖ್ಯ ಅತಿಥಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾನ್ಯ ಸಂಸದರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಇವರು ಭಾಗವಹಿಸಲಿದ್ದಾರೆ. ಕಾಠ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ವಹಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್, ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್ ಉಪಸ್ಥಿತರಿರುತ್ತಾರೆ.
ಸನ್ಮಾನ ಕಾಠ್ಯಕ್ರಮ:
ಈ ಸಂದರ್ಭದಲ್ಲಿ ವೈದ್ಯಕೀಯ ಹಾಗೂ ಸಮಾಜ ಸೇವೆ, ಕೃಷಿ, ಜನಪದ, ಸಾಮಾಜಿಕ ಹೋರಾಟ, ಶಿಕ್ಷಣ ಮುಂತಾದ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಗೌರವ ಸನ್ಮಾನ ಕಾಠ್ಯಕ್ರಮ ನಡೆಯಲಿರುವುದು. ಡಾ ಗೌರಿ ಪೈ-ವೈದ್ಯಕೀಯ ಮತ್ತು ಸಮಾಜ ಸೇವೆ, ಶ್ರೀ ಎಂ ರಾಮಮೋಹನ್ ರಾವ್-ಕಾನೂನು, ಡಾ. ಮೋಹನ್ ಕುಮಾರ್ ವೈ-ಸಾಮಾಜಿಕ ಹೋರಾಟ, ಸ್ನೇಹ ಶಿಕ್ಷಣ ಸಂಸ್ಥೆ ಸುಳ್ಯ-ಶಿಕ್ಷಣ ಕ್ಷೇತ್ರ, ಶ್ರೀಯುತ ಸತ್ಯಶಂಕರ್-ಉದ್ಯಮ ಮತ್ತು ವ್ಯವಹಾರ, ವೇ. ಮೂ. ಕಶೆಕೋಡಿ ಸೂರ್ಯನಾರಾಯಣ ಭಟ್-ಧಾರ್ಮಿಕ ಮತ್ತು ಸಮಾಜ ಸೇವೆ, ಡಾ ರವೀಶ್ ಪಡುಮಲೆ-ಜನಪದ, ಶ್ರೀದೇವಿ ಪ್ರಸಾದ್ ಕಡಮಜೆ-ಕೃಷಿ, ಶ್ರೀ ಪಿ.ಜಿ.ಎಸ್.ಎನ್ ಪ್ರಸಾದ್-ಮಳೆ ದಾಲೀಕರಣ, ಶ್ರೀ ಗೋವಿಂದ ಪಾಲೆಚ್ಚಾರು-ಯಕ್ಷಗಾನ ಸಾಧಕರನ್ನು ಸನ್ಮಾನಿಸಲಾಗುತ್ತದೆ. ಇದರೊಂದಿಗೆ ದಶಮಾನೋತ್ಸವದ ಸವಿನೆನಪಿಗಾಗಿ ಸಂಬಂಧಿಸಿದಂತೆ ವಸ್ತು ಪ್ರದರ್ಶನವು ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಸಭಾ ಕಾಠ್ಯಕ್ರಮದ ನಂತರ ಭಾರತೀಯ ಶ್ರೀಮಂತ ಜ್ಞಾನ ಸಂಪತ್ತಿನ ಅನಾವರಣ: ಶಿಕ್ಷಣದ ಕುರಿತು ಹೊಸ ದೃಷ್ಟಿಕೋನ ಎನ್ನುವ ವಿಚಾರವನ್ನು ಆಧರಿಸಿ ವಿಚಾರಗೋಷ್ಠಿ ನಡೆಯಲಿದ್ದು ಸಂಪನ್ಮೂಲ ವ್ಯಕ್ತಿಯಾಗಿ ಡಾ.ಸೀತಾರಾಮ್. ಎಂ.ಆರ್ ಮಾರ್ಗದರ್ಶಕರು, ಸ್ವಾಮಿ ವಿವೇಕಾನಂದ ಯುವಜನ ವಿಭಾಗ ಮೂಳೆ ಶಸ್ತ್ರಚಿಕಿತ್ಸಾ ತಜ್ಞರು ವಿವೇಕಾನಂದ ಆಸ್ಪತ್ರೆ, ಸರಗೂರು, ಮೈಸೂರು ಇವರು ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭ:
ಸಮಾರೋಪ ಸಮಾರಂಭದಲ್ಲಿ ಎಡನೀರು ಮಠದ ಶ್ರೀಶ್ರೀಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯರು ಸಾನಿಧ್ಯವಹಿಸಿ ಆಶೀರ್ವಚನ ಮಾಡಲಿದ್ದು, ಕಾಠ್ಯಕ್ರಮದಲ್ಲಿ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಪಿ.ಎಲ್ ಧರ್ಮ ಹಾಗೂ ಹಿರಿಯ ವಿದ್ಯಾರ್ಥಿ. DRDO ವಿಜ್ಞಾನಿ ಡಾ.ಮಹಾದೇವ ಭಟ್ ಕಾನತ್ತಿಲ ಭಾಗವಹಿಸಲಿದ್ದಾರೆ. ಜೊತೆಗೆ ಕಾಠ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಲಿದ್ದಾರೆ. ಕಾಲೇಜಿನ ಸ್ನಾತಕೋತ್ತರ ವಿಭಾಗಗಳಲ್ಲಿ ಕಳೆದ ಹತ್ತು ವರ್ಷಗಳಲ್ಲಿ ವ್ಯಾಸಂಗ ಮಾಡಿ, ರಾಂಕುಗಳನ್ನು ಗಳಿಸಿದ ವಿವಿಧ ವಿಭಾಗಗಳ ಹೆಮ್ಮೆಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾಠ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸಾಧಕ ಹಿರಿಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾಯಕ್ರಮವೂ ಜರುಗಲಿದೆ. ನಂತರ ವಿದ್ವಾನ್ ದೀಪಕ್ ಕುಮಾರ್ ಶ್ರೀ ಮೂಕಾಂಬಿಕಾ ಕಲ್ಬರಲ್ ಅಕಾಡೆಮಿಯವರು ‘ಗೆಜ್ಜೆಗಿರಿತ ಬೊಲ್ಲು’ ಎನ್ನುವ ನೃತ್ಯ ರೂಪಕವನ್ನು ಪ್ರಸ್ತುತಪಡಿಸಲಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ ಶ್ರೀಪತಿ ಕಲ್ಲೂರಾಯ, ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಶ್ರೀ ಮುರಳಿಕೃಷ್ಣ ಕೆ ಎನ್ ನ್ಯಾಯವಾದಿ. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ. ವಿಜಯ ಸರಸ್ವತಿ, ಉಪಪ್ರಾಂಶುಪಾಲ ಪ್ರೊ. ಶಿವಪ್ರಸಾದ್ ಉಪಸ್ಥಿತರಿದ್ದರು.