ವಿಟ್ಲ: ತುಳು ರಂಗ ಭೂಮಿ ಕಾಲವಿದ ಶಾರದಾ ಆರ್ಟ್ಸ್ ಮಂಜೇಶ್ವರ ಇದರ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು.
ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.