ಜಮ್ಮು-ಕಾಶ್ಮೀರದ ಪಹಲ್ಗಾಮ್‌ದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ಮಂಜುನಾಥ್ ಮೃತ ದುರ್ದೈವಿ. ಉದ್ಯಮಿ ಮಂಜುನಾಥ ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಸುರಕ್ಷಿತವಾಗಿದ್ದಾರೆ.
ಬೇಲ್ಪುರಿ ತಿನ್ನುವಾಗ ನೀನು ಮುಸಲ್ಮಾನನಾ ಅಂತ ಕೇಳಿ ಗುಂಡು ಹಾರಿಸಿದ ಉಗ್ರ – ದಾಳಿ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ
ಮೃತ ಮಂಜುನಾಥ್ ಪತ್ನಿ ಪಲ್ಲವಿ, ಏಪ್ರಿಲ್ 19ರಂದು ಪ್ರವಾಸಕ್ಕೆ ಬಂದಿದ್ವಿ. ನನ್ನ ಕಣ್ಣೆದುರಿಗೆ ನನ್ನ ಪತಿ ಮೃತಪಟ್ಟಿದ್ದಾರೆ. ನನ್ನ ಗಂಡನನ್ನ ಸಾಯಿಸಿ ನನ್ನ ಮಗನಿಗೆ ಬೈದು ಹಲ್ಲೆ ಮಾಡಿದ್ದಾರೆ. ನನ್ನ, ನನ್ನ ಮಗನನ್ನೂ ಕೊಂದು ಬಿಡು ಎಂದು ಹೇಳಿದ್ವಿ. ನಿನ್ನ ಕೊಲ್ಲಲ್ಲ ಹೋಗಿ ಮೋದಿಗೆ ಹೇಳು ಎಂದು ಹೇಳಿದರು. ನನ್ನ ಪತಿ ಕೊಂದು ಉಗ್ರರು ಅಲ್ಲೇ ಓಡಾಡುತ್ತಿದ್ದರು ಎಂದು ಹೇಳಿದರು.
ಮಂಜುನಾಥ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ, ಶಿವಮೊಗ್ಗದ ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು, ಮಂಜುನಾಥ್ ಪತ್ನಿ ಪಲ್ಲವಿಯವರು ಮಲ್ನಾಡ್ ಅಡಕೆ ಮಾರ್ಕೆಟಿಂಗ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ನ ಬೀರೂರು ಬ್ರ್ಯಾಂಚ್ನಲ್ಲಿ ಮ್ಯಾನೇಜರ್ ಆಗಿದ್ದಾರೆ.
ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದು, ಐದಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ, ಇದುವರೆಗೆ ಕೇವಲ ಇಬ್ಬರ ಸಾವಿನ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಘಟನೆ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪ್ರಧಾನಿ ಮೋದಿಯವರು ಗೃಹ ಸಚಿವ ಅಮಿತ್ ಶಾ ಅವರ ಜೊತೆ ಮಾತನಾಡಿದ್ದು, ಕೂಡಲೇ ಕಾಶ್ಮೀರಕಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ. ಇನ್ನು, ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆಗೆ ತೆರಳಿದ್ದ ಜಮ್ಮು-ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಶ್ರೀನಗರಕ್ಕೆ ವಾಪಸ್ ಆಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬ ಸದಸ್ಯರೊಂದಿಗೆ ನನ್ನ ಆಲೋಚನೆಗಳು ಇವೆ. ಈ ಭೀಕರ ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ. ಮತ್ತು ದುಷ್ಕರ್ಮಿಗಳ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಟನೆಯ ಬಗ್ಗೆ ವಿವರಿಸಲಾಯಿತು ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಲಾಯಿತು. ಎಲ್ಲಾ ಸಂಸ್ಥೆಗಳೊಂದಿಗೆ ತುರ್ತು ಭದ್ರತಾ ಪರಿಶೀಲನಾ ಸಭೆ ನಡೆಸುತ್ತೇವೆ.” ಎಂದಿದ್ದಾರೆ.