ಪುತ್ತೂರು: ಪುತ್ತೂರು–ಮಂಗಳೂರು ಹೆದ್ದಾರಿಯ ಕಬಕ ಕುವೆತ್ತಿಲ ಸಮೀಪ, ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನ ಬಂಟ್ವಾಳ ತಾಲೂಕಿನ ನರಿಕೊಂಬು ನಿವಾಸಿಗಳಾದ ಅರುಣ್ ಕುಲಾಲ್ ಹಾಗೂ ಅವರ ಮಗ ಧ್ಯಾನ್ ಎಂದು ಗುರುತಿಸಲಾಗಿದೆ.
ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಬಸ್, ಮಾಣಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರಿಬ್ಬರೂ ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದವರೆಂದು ತಿಳಿದುಬಂದಿದೆ. ಅಪಘಾತದ ಪರಿಣಾಮವಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿ, ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿದ್ದವು.