ಮಂಗಳೂರು: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನ ಘಟ್ಟ ಮುಳುಗಡೆಯಾಗಿದೆ.
ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚಿಸಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ.
ದೇವಸ್ಥಾನದ ಆಡಳಿತ ಸ್ನಾನಘಟ್ಟದ ಸುತ್ತ ಹಗ್ಗವನ್ನು ಕಟ್ಟಿ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿದೆ. ಪ್ರಕೃತಿ ವಿಕೋಪ ತಡೆ ಸಿಬ್ಬಂದಿ ನೇಮಕ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿದ್ದು ಇಂದೂ ಕೂಡಾ ರೆಡ್ ಅಲರ್ಟ್ ಜಾರಿಯಾಗಿದೆ. ಬಿಟ್ಟು ಬಿಡದೇ ನಿರಂತರವಾಗಿ ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆ ಸುರಿಯುತ್ತಿದೆ
ಮಳೆ ಅಬ್ಬರದ ಹಿನ್ನೆಲೆಯಲ್ಲಿ ಪುತ್ತೂರಿಗೆ 25 ಸಿಬ್ಬಂದಿಯ ಎನ್‌ಡಿಆರ್‌ಎಫ್ (NDRF) ಸಿಬ್ಬಂದಿ ಆಗಮಿಸಿದ್ದಾರೆ. ಭಾರೀ ಗಾಳಿ ಮಳೆ ಹಿನ್ನಲೆ ಅಧಿಕಾರಿಗಳಿಗೆ ಸರ್ವ ಸನ್ನದ್ಧ ಆಗಿರಲು ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಪರಿಹಾರ ಕಾರ್ಯಗಳಿಗಾಗಿ ರಾಷ್ಟೀಯ ಮತ್ತು ರಾಜ್ಯ ವಿಪತ್ತು ತಂಡಗಳು ಆಗಮಿಸಲಿವೆ. ಈ ಎರಡು ತಂಡಗಳನ್ನು ಮಳೆ ಪೀಡಿತ ಪ್ರದೇಶಗಳಿಗೆ ನಿಯೋಜಿಸಲಾಗುತ್ತಿದೆ. ವಿಪತ್ತು ನಿರ್ವಹಣೆಗಳಿಗೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಪಿಡಿಓಗಳು ತಮ್ಮ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ಬಳಿ ಯರಗುಂಡಿ ಜಲಾಪಾತದಲ್ಲಿ ಅಪಾಯಕ್ಕೆ ಸಿಲುಕಿದ್ದ ಐದು ಮಂದಿ ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸ್ಥಳೀಯರ ಮಾತನ್ನು ಕಡೆಗಣಿಸಿ ತುಂಬಿ ಹರಿಯುತ್ತಿದ್ದ ಜಲಪಾತದ ಮೇಲೆ ಐವರು ಪ್ರವಾಸಿಗರು ತೆರಲಿದ್ದರು. ಈ ಸಂದರ್ಭದಲ್ಲಿ ಹಠಾತ್ತನೇ ನೀರು ನುಂಗಿದ್ದರಿಂದ ಪ್ರವಾಸಿಗರು ಬಂಡೆಗಳ ನಡುವೆ ಸಿಕ್ಕಿಹಾಕಿಕೊಂಡರು. ತಕ್ಷಣ ಸ್ಥಳೀಯರು ಐವರನ್ನು ರಕ್ಷಿಸಿದ್ದಾರೆ. ಇದರಿಂದಾಗಿ ಪ್ರಾಣಹಾನಿ ತಪ್ಪಿದಂತಾಗಿದೆ.
ಕರಾವಳಿ ಮತ್ತು ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಮಣ್ಯ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರ ಧಾರಾ ನೀರು ತುಂಬಿ ಹರಿಯುತ್ತಿದ್ದು ಸ್ನಾನಘಟ್ಟ ಬಳಿ ತೆರಳದ್ದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿ ಸ್ನಾನಘಟ್ಟ ಸುತ್ತ ಹಗ್ಗವನ್ನು ಕಟ್ಟಿ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿದೆ.