ಬಜ್ಪೆ: 25-05-2025 ರಂದು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಸದಸ್ಯರು ಬಜ್ಪೆಯ ಶಾರದಾ ಮಂಟಪದ ಬಳಿ “ಬಜ್ಪೆ ಚಲೋ” ಎಂಬ ಶೀರ್ಷಿಕೆಯಡಿಯಲ್ಲಿ ಸುಹಾಸ್ ಶೆಟ್ಟಿ ಅವರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗೆ ವಹಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದು . ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಲಾಗಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಧ್ಯಾಹ್ನ 3:00 ರಿಂದ ಸಂಜೆ 5:00 ರ ನಡುವೆ ನಡೆದ ಕಾರ್ಯಕ್ರಮದಲ್ಲಿ ಸುಮಾರು 3,000 ಜನರು ಭಾಗವಹಿಸಿದ್ದು. ಪ್ರತಿಭಟನಾಕಾರರು ಬಜ್ಪೆ ಬಸ್ ನಿಲ್ದಾಣ ಮತ್ತು ಸುತ್ತಮುತ್ತ ಕಾನೂನುಬಾಹಿರವಾಗಿ ಜಮಾಯಿಸಿ, ರಾಜ್ಯ ಹೆದ್ದಾರಿ ಸಂಖ್ಯೆ 67 ರ ಕೆಲವು ಭಾಗಗಳನ್ನು ಹಾಗೂ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ಆಕ್ರಮಿಸಿಕೊಂದಿದ್ದಾರೆ, ಇದರಿಂದಾಗಿ ವಾಹನ ಸಂಚಾರ ಮತ್ತು ಸಾರ್ವಜನಿಕ ಪ್ರವೇಶಕ್ಕೆ ಅಡ್ಡಿಯಾಗಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ.
ಪ್ರತಿಭಟನೆಯ ಸಮಯದಲ್ಲಿ, ಭಾಷಣಕಾರರಲ್ಲಿ ಒಬ್ಬರು ಸುಹಾಸ್ ಶೆಟ್ಟಿ ಪ್ರಕರಣವನ್ನು ಉಲ್ಲೇಖಿಸಿ ಕೋಮು ಸಾಮರಸ್ಯವನ್ನು ಕೆರಳಿಸುವ ಮತ್ತು ಸಾರ್ವಜನಿಕ ಶಾಂತಿಯನ್ನು ಭಂಗಗೊಳಿಸುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಘಟನೆಯ ಆಧಾರದ ಮೇಲೆ, ಬಜ್ಪೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 90/2025 ರಲ್ಲಿ ಬಿಎನ್ಎಸ್ – ಸೆಕ್ಷನ್ 189(2), 191(2), 285, 192, 351(2), 351(3), 190 ಕರ್ನಾಟಕ ಪೊಲೀಸ್ ಕಾಯ್ದೆ, 1963 – ಸೆಕ್ಷನ್ 107, 109, ರ ಅಡಿಯಲ್ಲಿ ಈ ಕಾರ್ಯಕ್ರಮದ ಆಯೋಜಕರು ಮತ್ತು ಭಾಷಣಕಾರರ ವಿರುದ್ಧ ಪ್ರಕರಣ ದಾಖಲಾಗಿದೆ.