- ಮಂಗಳೂರು: ಭಾರಿ ಮಳೆ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಮಳೆ ಇದೇ ರೀತಿ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದ.ಕ.ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಅದೇ ರೀತಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.