ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ 1’ ಸಿನಿಮಾ ಈಗ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಚಿತ್ರದಲ್ಲಿ ನಟಿಸಿದ ಒಬ್ಬೊಬ್ಬರೇ ಕಲಾವಿದರು ಮೃತಪಡುತ್ತಿರುವುದು. ಈ ಮೊದಲ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಒಬ್ಬರು ನಿಧನ ಹೊಂದಿದ್ದರು. ಇದಾದ ಬಳಿಕ ಚಿತ್ರದ ಕಲಾವಿದ ರಾಕೇಶ್ ಪೂಜಾರಿ ಮೃತಪಟ್ಟರು. ಈಗ ಸಿನಿಮಾದ ಮತ್ತೋರ್ವ ಜೂನಿಯರ್ ಕಲಾವಿದ ಕೊನೆಯುಸಿರು ಎಳೆದಿದ್ದಾರೆ. ಈ ಮೂಲಕ ಕೆಲವೇ ತಿಂಗಳ ಅಂತರದಲ್ಲಿ ಚಿತ್ರದ ಮೂವರು ಮೃತಪಟ್ಟಂತೆ ಆಗಿದೆ.
ವಿಜು ವಿಕೆ ಎಂಬುವವರು ಮೃತ ದುರ್ಧೈವಿ. ಇವರು ಕೇರಳದ ತ್ರಿಶೂರ್ನವರು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟ್ಗಾಗಿ ಅವರು ಕರ್ನಾಟಕಕ್ಕೆ ಬಂದಿದ್ದರು. ಆಗುಂಬೆಯ ಸಮೀಪದ ಹೋಂ ಸ್ಟೇನಲ್ಲಿ ಉಳಿದುಕೊಂಡಿದ್ದರು. ಜೂನ್ 11ರಂದು ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ನಿಧನ ಹೊಂದಿದ್ದಾರೆ. ಕೇರಳದಿಂದ ಕುಟುಂಬಸ್ಥರು ಬಂದ ಬಳಿಕ ಮುಂದಿನ ಪ್ರಕ್ರಿಯೆ ನಡೆಯಲಿದೆ.