ಬೆಂಗಳೂರು: ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದ್ದ ಕೊಲೆ ರಹಸ್ಯವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಇಬ್ಬರು ಮಕ್ಕಳ ತಾಯಿ ಜತೆ ವಿವಾಹಿತನ ಲಿವಿಂಗ್ ಟುಗೆದರ್ನಲ್ಲಿದ್ದ ವ್ಯಕ್ತಿಯೇ ಕೊಲೆ ಮಾಡಿದ ವಿಚಾರ ಗೊತ್ತಾಗಿದ್ದು, ಆರೋಪಿ ಸಂಶುದ್ದೀನ್ ಎಂಬಾತನನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಕೊಲೆ ರಹಸ್ಯವನ್ನು ಪತ್ತೆ ಮಾಡಿದ್ದಾರೆ. ಮೃತ ಮಹಿಳೆಯನ್ನು ಆಶಾ ಎಂದು ಗುರುತಿಸಲಾಗಿದೆ.
ಕೊಲೆ ಆರೋಪಿ ಸಂಶುದ್ದೀನ್ ಅಸ್ಸಾಂ ಮೂಲದವ. ಆತನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಹೆಂಡತಿ ಹಾಗೂ ಮಕ್ಕಳು ಅಸ್ಸಾಂನಲ್ಲೇ ಇದ್ದು, ಸಂಶುದ್ದೀನ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾನೆ. ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಆಶಾ ಪರಿಚಯವಾಗಿದೆ. ಆಶಾ ಗಂಡ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಸಹ ಇದ್ದಾರೆ. ಇಬ್ಬರಲ್ಲೂ ಪ್ರಮಾಂಕುರವಾಗಿದ್ದು, ಹುಳಿಮಾವಿನಲ್ಲಿ ಮನೆ ಮಾಡಿಕೊಂಡು ಲಿವಿಂಗ್ ಟುಗೆದರ್ನಲ್ಲಿದ್ದರು.
ಪ್ರಾಥಮಿಕ ತನಿಖೆ ವೇಳೆ, ಹುಳಿಮಾವು ಬಳಿಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಕೊಲೆಯಾದ ಆಶಾ ಹಾಗೂ ಆರೋಪಿ ಸಂಶುದ್ದೀನ್‌ಗೆ ಪರಿಚಯವಾಗಿತ್ತು. ಕಳೆದ ಎರಡು ವರ್ಷಗಳಿಂದ ಇಬ್ಬರು ಲಿವ್ ಇನ್ ರಿಲೇಷನ್‌ನಲ್ಲಿದ್ದರು. ಆದರೆ ಮೃತ ಮಹಿಳೆ ದಿನಾಲೂ ಮನೆಗೆ ಬರುವಾಗ ಕುಡಿದು ಬಂದು ರಂಪಾಟ ಮಾಡುತ್ತಿದ್ದಳು. ಜೊತೆಗೆ ತಡರಾತ್ರಿವರೆಗೂ ಫೋನ್‌ನಲ್ಲಿ ಮಾತಾಡುತ್ತಿದ್ದಳು. ಇದೇ ಕಾರಣದಿಂದ ಇಬ್ಬರ ನಡುವೆ ಜಗಳವಾಗಿತ್ತು. ಜಗಳ ಅತಿರೇಕಕ್ಕೆ ಹೋಗಿ, ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಬಳಿಕ ಮೃತದೇಹವನ್ನು ಮೂಟೆಗೆ ಹಾಕಿ, ಬೈಕ್‌ನಲ್ಲಿ ತಂದು ಕಸದ ಲಾರಿಗೆ ಹಾಕಿ ಹೋಗಿದ್ದ ಎಂದು ತಿಳಿದುಬಂದಿದೆ.
ಪ್ರಕರಣ ದಾಖಲಾದ 20 ಗಂಟೆ ಒಳಗಾಗಿಯೇ ಹಂತಕನನ್ನು ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ನೇತೃತ್ವದ ತಂಡ ಬಂಧಿಸಿದೆ. ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿ ಹಂತಕನನ್ನ ಬಂಧಿಸಿದ್ದರು



 
                                









 
			










 
		