ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜು.17 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೆಮ್ಮಿಂಜೆ ಗ್ರಾಮದ ಸ.ನಂ.138/4 ರಲ್ಲಿ 3.00 ಎಕರೆ ಗೋಮಾಳ ಜಮೀನನ್ನು ಬಂಟರ ಸಂಘ ಪುತ್ತೂರು ತಾಲ್ಲೂಕು ಇದಕ್ಕೆ ಮಂಜೂರು ಮಾಡಿ ಆದೇಶಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೆಮ್ಮಿಂಜೆ ಗ್ರಾಮದ ಸ.ನಂ.138/4 ರಲ್ಲಿ 3.00 ಎಕರೆ ಗೋಮಾಳ ಜಮೀನನ್ನು ಬಂಟರ ಸಂಘ, ಪುತ್ತೂರು ತಾಲ್ಲೂಕು ಮಂಜೂರು ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದಲ್ಲಿ ಅಲ್ಪಸಂಖ್ಯಾತರ ವಿದ್ಯಾಥಿನಿಯರಿಗಾಗಿ ವಸತಿ ಸಹಿತ ಪದವಿ ಪೂರ್ವ ಕಾಲೇಜನ್ನು ರೂ.17.09 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಿ 400 ವಿದ್ಯಾರ್ಥಿನಿಯರ ಸಂಖ್ಯಾ ಬಲದೊಂದಿಗೆ ಪ್ರಾರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತು
ಅಂತರ್ಜಲ ಬಳಕೆಗೆ ನಿರಾಕ್ಷೇಪಣಾ ನೀಡುವ ಸಂಬಂಧ ಕೇಂದ್ರಿಯ ಅಂತರ್ಜಲ ಪ್ರಾಧಿಕಾರ ಇವರು ಹೊರಡಿಸಿರುವ ಮಾರ್ಗಸೂಚಿಯನ್ನು ಸೂಕ್ತ ಮಾರ್ಪಾಡುಗಳೊಂದಿಗೆ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತು.