ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗಳಿಗೆ ಜು.25 ರಂದು ರಜೆ ಘೋಷಿಸಲಾಗಿದೆ.
ಸಂಭಾವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ನೀರು ಇರುವ ತಗ್ಗು ಪ್ರದೇಶ. ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಬಾರದೆಂದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶದಲ್ಲಿ ಸೂಚಿಸಿದ್ದಾರೆ
























