ಶ್ರೀನಗರ, ಜುಲೈ 28: ಆಪರೇಷನ್ ಮಹಾದೇವ್ ಅಡಿಯಲ್ಲಿ ಭಾರತೀಯ ಸೇನೆಯು ಪಹಲ್ಗಾಮ್ ದಾಳಿ ಕೋರರಲ್ಲಿ ಮೂವರನ್ನು ಹತ್ಯೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶ್ರೀನಗರದಲ್ಲಿ ಉಗ್ರರನ್ನು ಸದೆಬಡಿಯಲಾಗಿದೆ. ದಾಳಿಯ ಮಾಸ್ಟರ್ಮೈಂಡ್ ಹಾಶಿಮ್ ಮೂಸಾ ಸೇರಿ ಮೂವರನ್ನು ಹತ್ಯೆಗೈಯಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಸುತ್ತುವರೆದಿದ್ದ ಸೇನೆಯು ಮೂವರು ಭಯೋತ್ಪಾದಕರನ್ನು ಕೊಂದಿದೆ. ಭಯೋತ್ಪಾದಕರನ್ನು ಬೇರು ಸಹಿತ ನಿರ್ಮೂಲನೆ ಮಾಡಲು ಆಪರೇಷನ್ ಮಹಾದೇವ್ ಆರಂಭಿಸಿರುವ ಭದ್ರತಾ ಪಡೆಗಳು ಉಗ್ರರನ್ನು ಸದೆಬಡಿಯುತ್ತಿದೆ.
ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಕೊಂದ ಮೂವರು ಭಯೋತ್ಪಾದಕರನ್ನು ಭಾರತೀಯ ಪಡೆಗಳು ಕೊಂದಿವೆ. ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರಾದ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ. ಪಹಲ್ಗಾಮ್ ಘಟನೆಯ ನಂತರ, ಸೇನೆಯು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಅವರ ತಲೆಗೆ ತಲಾ 20 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.
ಕಾಂಗ್ರೆಸ್ ತನ್ನ ಚಾಳಿ ಮುಂದುವರೆಸಿದ್ದು ಮತ್ತೆ ಶತ್ರುಗಳಿಗೆ ಬೆಂಬಲವಾಗಿ ನಿಂತಿದೆ. ಉಗ್ರರ ಕಥೆ ಏನಾಗಿದೆ ಎಂಬುದಕ್ಕೆ ಉತ್ತರ ಈ ಸಿಕ್ಕಿದೆ. ಉಗ್ರರ ಪೈಕಿ ಮೂವರು ಎನ್ಕೌಂಟರ್ಗೆ ಬಲಿಯಾಗಿದ್ದಾರೆ.