ಬೆಂಗಳೂರು: ಭಯೋತ್ಪಾದನಾ ಚಟುವಟಿಕೆ ಹಾಗೂ ಭಯೋತ್ಪಾದಕರಿಗೆ ಬೆಂಬಲ ನೀಡಿದ ಆರೋಪದಡಿ ನಗರದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಮಹಿಳೆಯನ್ನು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ನಗರದಲ್ಲಿ ಬಂಧಿಸಿದ್ದಾರೆ
ಜಾರ್ಖಂಡ್ ಮೂಲದ ಶಮಾ ಪರ್ವೀನ್ ಬಂಧಿತ ಮಹಿಳೆ. ಹೆಬ್ಬಾಳದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಹೋದರನ ಮನೆಯಲ್ಲಿ ಶಮಾ ಪರ್ವೀನ್ ನೆಲಸಿದ್ದಳು. ಆಕೆ ಎಲ್ಲಿಯೂ ಕೆಲಸಕ್ಕೆ ಹೋಗುತ್ತಿರಲಿಲ್ಲ. ನಗರದ ಮನೋರಾಯನಪಾಳ್ಯ ಪ್ರದೇಶದಲ್ಲಿದ್ದ ಸಹೋದರನ ಮನೆಯಲ್ಲೇ ಕಾಲಕಳೆಯುತ್ತಿದ್ದಳು ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನಲ್ಲಿ ಅಲ್ ಖೈದಾ ಜಾಲವನ್ನು ಬಲಪಡಿಸುವಲ್ಲಿ ಆಕೆಯ ಪಾತ್ರವಿದೆ ಎಂದು ATS ತನಿಖೆಯು ಬಹಿರಂಗಪಡಿಸಿದೆ.
ಆರೋಪಿಯಿಂದ ಡಿಜಿಟಲ್ ಉಪಕರಣಗಳು, ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶಮಾ ಪರ್ವೀನ್ ಪದವೀಧರೆಯಾಗಿದ್ದು, ಅವರು ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಳು.
ಸಮಾ ಪರ್ವೀನ್ ಭಯೋತ್ಪಾದಕ ಚಟುವಟಿಕೆಗಳಲ್ಲಿ ಶಾಮಿಲಾಗಿರುವುದು ರಹಸ್ಯ ತನಿಖೆಯಲ್ಲಿ ತಿಳಿದುಬಂದಿದೆ. ಆನ್‌ಲೈನ್ ವೇದಿಕೆಗಳಲ್ಲಿ ಜಿಹಾದಿ ಪಿತೂರಿ ನಡೆಸಿದ್ದಾಗಿ ವಿಚಾರಣೆ ವೇಳೆ ಆಕೆ ಒಪ್ಪಿಕೊಂಡಿದ್ದಾಳೆ ಎಂದು ಗುಜರಾತ್ ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಮಾ ಪರ್ವೀನ್ ಆನ್‌ಲೈನ್ ಮೂಲಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ತನಿಖೆಯ ಸಮಯದಲ್ಲಿ ಆಕೆಯಿಂದ ವಿವರವಾದ ಪುರಾವೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಳ್ಳಲಾಗಿದೆ. ಈಗ ಹೆಚ್ಚಿನ ಮಾಹಿತಿಯನ್ನು ಪಡೆಯಲು ಆಂತರಿಕ ವಿಚಾರಣೆಯನ್ನು ಪ್ರಾರಂಭಿಸುತ್ತಿದೆ ಎಂದು ಎಟಿಎಸ್ ತಿಳಿಸಿದೆ.
ಆಕೆ ಅಲ್ ಖೈದಾದಲ್ಲಿ ಕೆಲಸ ಮಾಡುತ್ತಿದ್ದರು. ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಗುಂಪಿನ ಸಿದ್ಧಾಂತವನ್ನು ಬಹಿರಂಗವಾಗಿ ಬೆಂಬಲಿಸುತ್ತಿದ್ದಳು ಎಂದು ಆರೋಪಿಸಲಾಗಿದೆ. ಆಕೆ ಪ್ರಮುಖ ಅಲ್ ಖೈದಾ ಕಾರ್ಯಕರ್ತನ ವೀಡಿಯೊಗಳನ್ನು ಹಂಚಿಕೊಂಡಿದ್ದಳು . ಯುವಕರನ್ನು ಭಯೋತ್ಪಾದನೆಗೆ ಪ್ರೋತ್ಸಾಹಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.