ಮಂಗಳೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನಲಾದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡವು (ಎಸ್‌ಐಟಿ) ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲು ಅಧಿಕೃತ ಸಹಾಯವಾಣಿ ಆರಂಭಿಸಿದೆ.
ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.31ರಂದು 6ನೇ ಗುರುತಿನ ಉತ್ಖನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಗಳು ಅದನ್ನು ಸಂಗ್ರಹಿಸಿ,ಪರೀಕ್ಷೆಗೆ ಒಳಪಡಿಸಲಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಅಥವಾ ಸುಳಿವುಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ವಿವರಗಳನ್ನು ಹಂಚಿಕೊಳ್ಳಲು ಅನುಕೂಲವಾಗುವಂತೆ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಐ.ಬಿ.ಯಲ್ಲಿನ ಎಸ್‌ಐಟಿ ಕಚೇರಿಯಲ್ಲಿ ಈ ಸಹಾಯವಾಣಿ ತೆರೆಯಲಾಗಿದೆ. ಸಾರ್ವಜನಿಕರು ದೂರವಾಣಿ ಸಂಖ್ಯೆ 0824 – 2005301
ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಎಸ್‌ಐಟಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಮೂಲಗಳು ತಿಳಿಸಿವೆ.