ರಾಜ್ಯಾದ್ಯಂತ ಒಂದು ವರಾಗಳ ಕಾಲ ಒಣಹವೆ ಮುಂದುವರೆಯಲಿದೆ. ಈ ಮೂಲಕ ರಾಜ್ಯದಲ್ಲಿ ಮಳೆ ನಿರೀಕ್ಷೆಯಲ್ಲಿದ್ದ ಜನರಿಗೆ ಭಾರಿ ನಿರಾಸೆಯಾಗಲಿದೆ. ಜೊತೆಗೆ, ಮುಂದಿನ ಐದು ದಿನಗಳ ಕಾಲ ಶಾಖದ ಅಲೆಗಳು (ಉಷ್ಣದ ಅಲೆ) ಉಂಟಾಗಲಿದ್ದು, ಉಷ್ಣಾಂಶವೂ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಮೊದಲ ದಿನವಾದ ಇಂದು ಬುಧವಾರ ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಹೆಚ್ಚಾಗುವ ಸಾಧ್ಯತೆ ಇದೆ. ಏ.25ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.
ಏ.27ರಂದು ಹಾಗೂ ಏ.28ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಒಣಹವೆ ಹೆಚ್ಚಾಗುವ ಸಾಧ್ಯತೆ ಇದೆ. ಜೊತೆಗೆ ಏಪ್ರಿಲ್ 24 ರಿಂದ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.