ಬೆಳ್ತಂಗಡಿ: ದಿನಾಂಕ 11.08.2025 ರಂದು ಧರ್ಮಸ್ಥಳದ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಟೇಬಲ್ ಟೆನಿಸ್ ಟೂರ್ನಮೆಂಟ್ ನಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಶಾಲಾ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದೆ.
ತಂಡದಲ್ಲಿದ್ದ ನೀರಜ್, ಸಾತ್ವಿಕ್, ಶಿವರಾಜ್ ಇವರಿದ್ದು ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಕೃಷ್ಣಾನಂದ ತರಬೇತಿಯನ್ನು ನೀಡಿರುತ್ತಾರೆ.
























