ಬೆಳ್ತಂಗಡಿ : ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಮಾಜಿ ಸೈನಿಕರಾದ ಮೋಹನ್ ಶೆಟ್ಟಿ ಬಾಂಗೇರು ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ, ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರಾದ ಪ್ರಸಾದ್ ಅಂಡಿಲ, ಶಿಶುಮಂದಿರ ಗೌರವಧ್ಯಕ್ಷರಾದ ಉದಯ ಭಟ್ ಕೊಳಬ್ಬೆ, ಅಧ್ಯಕ್ಷರಾದ ರಮೇಶ್ ನೆಕ್ಕರಾಜೆ, ಪದಾಧಿಕಾರಿಗಳು, ಪೋಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು, ಮಾತಾಜಿ ಪುಷ್ಪಲತಾ ನಿರೂಪಿಸಿದರು, ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.