ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನೆರವೇರಿತು. ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾಂಜಾಳ, ನಿರ್ದೇಶಕರು, ಸಿಬ್ಬಂದಿ ವರ್ಗ ಹಾಗೂ ಸಂಘ ಸದಸ್ಯರುಗಳು, ಜನಪ್ರತಿನಿದಿನಗಳು, ಪ್ರಮುಖರು ಉಪಸ್ಥಿತರಿದ್ದರು. ನಿರ್ದೇಶಕರು ವಕೀಲರಾದ ಉದಯ್ ಬಿ. ಕೆ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅಂಕಿತಾ.ಬಿ ಇವರುಗಳು ಕಾರ್ಯಕ್ರಮ ನಿರ್ವಹಿಸಿದರು.