ಮಚ್ಚಿನ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಮಚ್ಚಿನ ನಮನ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಪ್ರಮುಖರು ಹಿರಿಯರಾದ ಪದ್ಮನಾಭ ಅರ್ಕಜೆ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಮತಿ ವಸಂತಿ ಲಕ್ಷ್ಮಣರವರು ಉದ್ಘಾಟನಾ ಭಾಷಣ ಮಾಡಿದರು
. ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಂಡಲ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಡoತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗೋಪಾಲ ಕೃಷ್ಣ. ಕೆ, ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಚಂದ್ರಕಾಂತ ಗೌಡ ನಿಡ್ಡಾಜೆ ಬೈಠಕ್ ನೀಡಿದರು.
ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್, ಮಚ್ಚಿನ ಪಂಚಾಯತ್ ಅಧ್ಯಕ್ಷರಾದ ರುಕ್ಮಿಣಿ, ಅಭ್ಯಾಸ ವರ್ಗ ಪ್ರಭಾರಿ ವಿಶ್ವನಾಥ ಹಾರಾಬೆ, ಮಚ್ಚಿನ ಶಕ್ತಿ ಕೇಂದ್ರ ಪ್ರಮುಖ್ ನಾರಾಯಣ ಶೆಟ್ಟಿ ನೆತ್ತರ, ಪ್ರಮುಖರು, ಜನಪ್ರತಿನಿದಿನಗಳು ಹಾಗೂ ಅನ್ಯನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು ನಾರಾಯಣ ಶೆಟ್ಟಿ ನೆತ್ತರ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.