ಪುತ್ತೂರು : ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ನಿ.ದರ್ಬೆ, ಪುತ್ತೂರು ಸಂಘದ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನ ವಿತರಣೆ. ಸಂಘವು ತನ್ನ ಸಾಮಾಜಿಕ ಕಾರ್ಯದ ಮೂಲಕ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಸರಕಾರಿ ಶಾಲೆಗಳಲ್ಲಿ 5. ರಿಂದ 10 ನೇ ತರಗತಿಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ತನ್ನ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನವನ್ನು ಮಹಾಸಭೆಯ ದಿನದಂದು ನೀಡಿಕೊಂಡು ಬರುತ್ತಿದ್ದು, ಈ ವರೆಗೆ ಒಟ್ಟು ರೂ.26.29,000/- ಮೊತ್ತವನ್ನು ಒಟ್ಟು 1295 ವಿದ್ಯಾರ್ಥಿಗಳಿಗೆ ವಿತರಿಸಿದ್ದು. ಮಾತ್ರವಲ್ಲದೆ ಹಲವಾರು ಸಂಘ ಸಂಸ್ಥೆಗಳಿಗೆ ಆರ್ಥಿಕ ನೆರವನ್ನು ಕೂಡ ನೀಡಿರುತ್ತೇವೆ.
ದಿನಾಂಕ 13-09-2025 ರಂದು ನಡೆಯುವ ಸಂಘದ 2024-25 ನೇ ಸಾಲಿನ ಮಹಾಸಭೆಯ ನಂತರ ನಡೆಯುವ ಸಮಾರಂಭದಲ್ಲಿ ಈ ವರ್ಷ 7 ಮತ್ತು 8ನೇ ತರಗತಿಯಲ್ಲಿ ಕಲಿಯುತ್ತಿರುವ 250 ಮಕ್ಕಳಿಗೆ ತಲಾ 2,000/- ರಂತೆ ವಿದ್ಯಾರ್ಥಿ ವೇತನವನ್ನು ಗಣ್ಯರ ಉಪಸ್ಥಿತಿಯಲ್ಲಿ ವಿತರಿಸಲಾಗುವುದು.
ಈ ಸಮಾರಂಭದ ಉದ್ಘಾಟಣೆಯನ್ನು ಶ್ರೀ ಕೆ ಜೈರಾಜ್ ಬಿ ರೈ ಅಧ್ಯಕ್ಷರು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಲಿಮಿಟೆಡ್ ಮಂಗಳೂರು ಇವರು ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಶಶಿಕುಮಾರ್ ರೈ ಬಾಲ್ಗೊಟ್ಟು ಅಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಶಶಿಧರ್ ಜಿ ಎಸ್ ಉಪನಿರ್ದೆಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ದ.ಕ ಜಿಲ್ಲೆ, ಶ್ರೀ ಜಯರಾಮ ರೈ ಎ ಕೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಶ್ರೀ ಮಹಿಷಾ ಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಕೆಯ್ಯರು ಇವರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.