ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.)ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು.ಇದರ ಸಹಯೋಗದಲ್ಲಿ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಹಾಗೂ ಮಹಾಕಾಳಿ ಅಮ್ಮನವರ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಿ ನಂತರ ಬಿಡುಗಡೆಗೊಂಡಿತು.
ಹಿರಿಯರಾದ ಡಾ| ಕೆ.ಜಿ. ಭಟ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವ ಸಲಹೆಗಾರರಾದ ಚಂದಪ್ಪ ಮೂಲ್ಯ ಮಾತನಾಡಿ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವನ್ನು ಉಪ್ಪಿನಂಗಡಿಯ ಜನತೆ ತನು, ಮನ, ಧನ ಗಳ ಸಹಕಾರದೊಂದಿಗೆ ಯಶಸ್ವಿಗೊಳಿಸುವಂತೆ ಕೋರಿಕೊಂಡರು.
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಂಚಾಲಕರಾದ ಅರುಣಕುಮಾರ್ ಪುತ್ತಿಲ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವಿ ಸಾಮ್ರಾಜ್ಯೋತ್ಸವದ ಎರಡು ದಿವಸಗಳ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ನೀಡಿ, ಉಪ್ಪಿನಂಗಡಿ ಭಾಗದ ಜನತೆಯ ಪೂರ್ಣಪ್ರಮಾಣದ ಸಹಕಾರ ಕೋರಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಪುತ್ತಿಲ ಪರಿವಾರ ಟ್ರಸ್ಟಿನ ಅಧ್ಯಕ್ಷರಾದ ಶ್ರೀರಾಮ ಭಟ್ ಪಾತಾಳ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕಾರ್ಯದಕ್ಷರಾದ ಪ್ರಾಣೇಶ್ ಕೆಮ್ಮಾಯಿ,ಉಪಸ್ಥಿತರಿದ್ದರು, ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ನೆಕ್ಕಿಲಾಡಿ ಕಾರ್ಯಕ್ರಮದ ಸ್ವಾಗತ ಮಾಡಿ ವಂದಿಸಿದರು. ಕಾರ್ಯಕ್ರಮದಲ್ಲಿ ಟ್ರಸ್ಟಿನ ಪದಾಧಿಕಾರಿಗಳು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.