ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ವಿಡಿಯೋ ತಯಾರಿಸಿ, ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆಗೆ ಸಂಬಂಧಿಸಿ, ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರ ದೂರಿನ ಆಧಾರದ ಮೇಲೆ, ನವೀನ್ ಕೈಕಾರ ಎಂಬಾತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರು ಸಲ್ಲಿಸಿದ ದೂರಿನ ಪ್ರಕಾರ, ಸೆಪ್ಟೆಂಬರ್ 15 ರಂದು ಅವರು ಮನೆಯಲ್ಲಿದ್ದಾಗ ನವೀನ್ ರೈ ಕೈಕಾರ ಎಂಬಾತ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಉದ್ದೇಶಿಸಿ ಅಶ್ಲೀಲ ಮತ್ತು ಅಸಂಬದ್ಧ ಪದಗಳನ್ನು ಬಳಸಿ ವಿಡಿಯೋ ತಯಾರಿಸಿ, ಅದನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾನೆ ಎಂದು ಆರೋಪಿಸಲಾಗಿದೆ.ನಾಯಕರ ಮಾಡೋದು ಮತ್ತು ಸಂಸದರ ತೇಜೋವದೆ ಇವನ ಚಾಳಿ ಯಾಗಿದೆ ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.