ಪುತ್ತೂರು: ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯಾಧ್ಯಕ್ಷರು ಕಾಂಗ್ರೆಸ್ ಪಕ್ಷದ ಜನಪ್ರಿಯ ನಾಯಕಿ ಪಕ್ಷದ ಸಂಘಟಕರು ವಿದ್ಯಾವಂತ ಯುವ ನಾಯಕಿ ಆಗಿರುವ ಶ್ರೀಮತಿ ಚಂದ್ರಪ್ರಭಾ ಗೌಡ ಇವರ ಪದಗ್ರಹಣ ಸಮಾರಂಭವು ಸೆ.21 ಭಾನುವಾರ ದಿವಸ ಪುತ್ತೂರು ಕಾಂಗ್ರೆಸ್ ಕಚೇರಿಯ ಮೇಲ್ಚಾವಣಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ . ಈ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೃಷ್ಣಪ್ರಸಾದ್ ಆಳ್ವ, ದಕ್ಷಿಣ ಕನ್ನಡ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಕುಮಾರಿ ಅಪ್ಪಿ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಶ್ರೀಮತಿ ಉಷಾ ಅಂಚನ್, ಉದ್ಯಮಿಯಾದ ಶ್ರೀಮತಿ ಸುಮಾ ಅಶೋಕ್ ರೈ, ಮಾಜಿ ಜಿ.ಪಂ.ಸದಸ್ಯರಾದ ಶ್ರೀಮತಿ ಅನಿತಾ ಹೇಮನಾಥ್ ಶೆಟ್ಟಿ, ಮೊದಲಾದವರು ಭಾಗವಹಿಸಲಿದ್ದಾರೆ .ಕಾರ್ಯಕ್ರಮದ ವಿಶೇಷತೆಯಾಗಿ ಎನ್.ವಿ ಡ್ಯಾನ್ಸ್ ಸ್ಟುಡಿಯೋ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ .