ಸೆಪ್ಟೆಂಬರ್ 21: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 26 ರಂದು ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಅನಂತೇಶ್ವರ ಫ್ರೆಂಡ್ಸ್ ಇದರ ಅಧ್ಯಕ್ಷರಾದ ಶ್ರೀ ಸಂತೋಷ್ ನಾಯ್ಕ ಕುದ್ದoಟೆ, ಗೌರವಾಧ್ಯಕ್ಷರಾದ ಶ್ರೀ ವಿಶ್ವನಾಥ ಪೂಜಾರಿ ಬಾಯ್ತರಡ್ಡ, ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಗೌಡ ಮತ್ತು ಅನಂತೇಶ್ವರ ಫ್ರೆಂಡ್ಸ್ ಇದರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.