ಬೆಳ್ತಂಗಡಿ : ಅ.11. ಬೆಳ್ತಂಗಡಿ ತಾಲೂಕಿನಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ .ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ 05 ವಿದ್ಯಾರ್ಥಿ ನಿಲಯಗಳಿಗೆ ಜಮೀನಿನ ಲಭ್ಯತೆಯಿದ್ದು ಸದ್ರಿ 05 ನಿಲಯಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಲು ತಲಾ 5.00ಕೋಟಿ ರೂಪಾಯಿ ವೆಚ್ಚದಂತೆ ಒಟ್ಟು ರೂ.25.00 ಕೋಟಿ ಅನುದಾನವನ್ನು ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ರೂ.1.30 ಕೋಟಿ ಅನುದಾನವನ್ನು ಮಂಜೂರುಗೊಳಿಸುವಂತೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಮಾನ್ಯ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರಿಗೆ ಮನವಿಯನ್ನು ಸಲ್ಲಿಸಿದರು.