ಪುತ್ತೂರು: ಅ.20 ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೀಪಾವಳಿ ಪ್ರಯುಕ್ತ ನಡೆಯುವ 13 ನೇ ವರ್ಷದ ವಸ್ತ್ರದಾನ ಹಾಗೂ ಸಹಭೋಜನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಯಿತು.
ಶಾಸಕ ಅಶೋಕ್ ರೈ ಅವರು ಸಿದ್ದರಾಮಯ್ಯ ಅವರಿಗೆ ಆಮಂತ್ರಣವನ್ನು ನೀಡಿ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿದರು. ಸಿದ್ದರಾಮಯ್ಯ ಅವರು ಅಶೋಕಜನಮನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ . ಅಶೋಕ್ ರೈ ಶಾಸಕರಾದ ಬಳಿಕ ಪ್ರಥಮ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುತ್ತೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿಭರದ ಸಿದ್ದತೆಗಳು ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿಭಾಗವಹಿಸಲಿದ್ದಾರೆ.