ಸರಿಗಮಪ ಖ್ಯಾತಿಯ ಸುಹಾನಾ ಸೈಯದ್ ಮಂತ್ರ ಮಾಂಗಲ್ಯ ವಿವಾಹ ಪದ್ಧತಿ ಮೂಲಕ ಬಹುಕಾಲದ ಗೆಳೆಯ, ರಂಗಭೂಮಿ ಕಲಾವಿದ ನಿತಿನ್ ಅವರನ್ನು ಮದುವೆಯಾಗಿದ್ದಾರೆ.
ಹಿಂದೂ ಭಕ್ತಿಗೀತೆಯನ್ನು ಹಾಡುವ ಮೂಲಕ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದ ಸುಹಾನಾ ದಿಟ್ಟತನದಿಂದ ಹಾಡಿ ಸಂಗೀತ ಪ್ರೇಮಿಗಳ ಹೃದಯ ಗೆದ್ದಿದ್ದರು. ಅವರಿಗೆ ಅಪಾರ ಅಭಿಮಾನಿಗಳೂ ಇದ್ದಾರೆ. ಈಗ ನಟಿ ಮಿಸ್ನಿಂದ ಮಿಸಸ್ ಆಗಿದ್ದಾರೆ.

”ಪ್ರತಿ ಜೀವಿಯ ಅನ್ವೇಷಣೆ ಪ್ರೇಮಕ್ಕಾಗಿಯೇ. ಪ್ರತಿ ಜೀವಿಯ ನಿರೀಕ್ಷೆ ಪ್ರೇಮಕ್ಕಾಗಿಯೇ, ಪ್ರೇಮಕ್ಕೆ ಕಾರಣ ಇಲ್ಲ. ಈ ಪ್ರೇಮ ಅನಂತ ದೂರದ ಸುಧೀರ್ಘ ಪ್ರಯಾಣ…….. ಪ್ರೇಮಕ್ಕೆ ಯಾವ ಮಿತಿ ಇಲ್ಲ, ಎಂಬುದಕ್ಕೆ ನಾವೇ ಸಾಕ್ಷಿ.
ಹೃದಯಗಳ ಭಾಷೆ ಎಲ್ಲವನ್ನೂ ಮೀರಿದ್ದು.. ಪ್ರತಿ ಸವಾಲು, ಪ್ರತಿ ಸಂಶಯ ಮತ್ತು ಪ್ರತಿ ಭಯದ ಮೌನದಲ್ಲಿಯೂ ನಮ್ಮನ್ನು ಹಿಡಿದಿಟ್ಟಿದ್ದು ಪ್ರೀತಿ.. ಇಂದು, ನಮ್ಮ ಗುಟ್ಟನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ.. ನಿಮ್ಮ ಆಶೀರ್ವಾದವಿರಲಿ !” ಎಂದು ಸುಹಾನಾ ಪೋಸ್ಟ್ ಶೇರ್ ಮಾಡಿದ್ದರು.