ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಹೆಚ್.ಎಸ್.ಆರ್.ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇನ್ನು ವಾಹನಗಳ ಮಾಲೀಕರು ಸಾರಿಗೆ ಇಲಾಖೆಯ ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಂಡು ಹೆಚ್.ಎಸ್.ಆರ್.ಪಿ (HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಅಳವಡಿಕೆ ಮಾಡಲು ಸಾರಿಗೆ ಇಲಾಖೆ ನವೆಂಬರ್ 17ರ ವರೆಗೆ ಕಾಲಾವಕಾಶ ನೀಡಿ ಆದೇಶ ಹೊರಡಿಸಿದೆ.
ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಎಂದರ್ಥ. ವಾಹನಗಳ ನಂಬರ್ ಪ್ಲೇಟ್ ನಲ್ಲೇ ಈ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತೆ. ಈ ತಂತ್ರಜ್ಞಾನದಿಂದ ವಾಹನ ಕಳ್ಳತನ, ಕದ್ದ ವಾಹನ ಬಳಸಿ ಮಾಡೋ ಕೃತ್ಯಗಳನ್ನು ತಡೆಯಲು ಸಹಾಯವಾಗುತ್ತೆ. ಜೊತೆಗೆ ಕಾನೂನು ಉಲ್ಲಂಘನೆ ಪ್ರಕರಣಗಳನ್ನು ಬೇಧಿಸಲು ಅನುಕೂಲಗಲಿದೆ. ಶಾಶ್ವತ ಗುರುತಿನ ನಂಬರ್ ಒದಗಿಸುತ್ತದೆ. ಇನ್ನೂ ಈ ತಂತ್ರಜ್ಞಾನ ಅಳವಡಿಸಿರೋ ವಾಹನ ರಸ್ತೆಯಲ್ಲಿ ಸಂಚರಿಸುವಾಗಲೇ ವಾಹನವನ್ನು ಗುರುತಿಸಬಹುದು. ಇನ್ನೂ ಈ ನಂಬರ್ ಪ್ಲೇಟ್‌ಗಳಲ್ಲಿ ಲೇಸರ್ ತಂತ್ರಜ್ಞಾನದ ಅಳವಡಿಕೆಯೂ ಮಾಡಲಾಗಿರುತ್ತದೆ.
ರಾಜ್ಯದ ಎಲ್ಲ ವಾಹನಗಳಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನಗಳು, ಟೇಲರ್, ಟ್ರ‍್ಯಾಕ್ಟರ್ ಸೇರಿದಂತೆ ಎಲ್ಲಾ ವಾಹನಗಳ ಮೇಲೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (HSRP) ಅಳವಡಿಸುವಿಕೆ ಕಡ್ಡಾಯ ಮಾಡಲಾಗಿದೆ.
ಕರ್ನಾಟಕದಲ್ಲಿ 1ನೇ ಏಪ್ರಿಲ್ 2019 ಕ್ಕಿಂತ ನಂತರದಲ್ಲಿ ನೋಂದಾಯಿಸಲ್ಪಟ್ಟ ಬಹುತೇಕ ವಾಹನಗಳಲ್ಲಿ ಈ ನಂಬರ್ ಪ್ಲೇಟ್ ಇದೆ ಎನ್ನಲಾಗಿದೆ. ಆದರೆ, ಅದಕ್ಕೆ ಮೊದಲು ನೋಂದಾಯಿತವಾಗಿರುವ ಹಳೆಯ ಮತ್ತು ಅಸ್ತಿತ್ವದಲ್ಲಿರುವ ವಾಹನಗಳಲ್ಲಿ ಇದನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶ ನೀಡಲಾಗಿದೆ. HSRP ನಂಬರ್ ಪ್ಲೇಟ್ ಜೋಡಣೆಗಾಗಿ, ಆನೈನ್ ಕಚೇರಿ ಅಥವಾ ಮನೆಯಿಂದಲೂ ಅರ್ಜಿ ಸಲ್ಲಿಸಬಹುದು.