ಪುತ್ತೂರು; ಅ.20 ರಂದು ಪುತ್ತೂರಿನಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಪ್ರಮುಖರು ಆಗಮಿಸುವ ಹಿನ್ನೆಲೆಯಲ್ಲಿ ನಗರದ ರಸ್ತೆಗಳ ತೇಪೆ ಮುಚ್ಚುವ ಕಾಮಗಾರಿ ಆರಂಭಗೊಂಡಿದೆ.
ಪುತ್ತೂರು ನಗರದ ಪ್ರಮುಖ ರಸ್ತೆ, ಪುತ್ತೂರು ಉಪ್ಪಿನಂಗಡಿ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳ ಹೊಂಡ ಮುಚ್ಚುವ ಕಾಮಗಾರಿಗೆ ಶಾಸಕರ ಸೂಚನೆಯಂತೆ ಚಾಲನೆ ನೀಡಲಾಗಿದೆ. ಕಾಮಗಾರಿ ಯನ್ನು ಶಾಸಕ ಅಶೋಕ್ ರೈ ವೀಕ್ಷಣೆ ಮಾಡಿದರು.