ಏ.28.ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಪುತ್ತೂರಿನ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ವರನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಆಯ್ಕೆ ಮಾಡಿರುತ್ತಾರೆ.
ಕೆಪಿಸಿಸಿ ಆದೇಶವನ್ನು ಸ್ವಾಗತಿಸಿದ ಶಾಸಕ ಅಶೋಕ್ ಕುಮಾರ್ ರವರು ತಕ್ಷಣ ಬೈಂದೂರು ಕ್ಷೇತ್ರಕ್ಕೆ ಭೇಟಿ ನೀಡಿ ಪಕ್ಷದ ಮುಖಂಡರು ಮಾಜಿ ಶಾಸಕರು ಮತ್ತು ಕಾರ್ಯಕರ್ತರನ್ನು ಭೇಟಿಯಾಗಿ ಪಕ್ಷದ ಸಂಘಟನೆ ಬಗ್ಗೆ ಗೆಲುವಿನ ಬಗ್ಗೆ ಸಭೆಯನ್ನು ಮಾಡಿ ಲೋಕಸಭಾ ಅಭ್ಯರ್ಥಿಯನ್ನು ಗೆಲ್ಲಿಸುವ ಸಂಪೂರ್ಣ ಜವಾಬ್ದಾರಿಯನ್ನು ವಹಿಸಲಿದ್ದಾರೆ