ಜಾಲ್ಸೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಸ್ನೇಹ ವಿದ್ಯಾ ಸಂಸ್ಥೆ ಮತ್ತು ಗ್ರೀನ್ ವ್ಯೂ ವಿದ್ಯಾ ಸಂಸ್ಥೆ ಇದರ ವತಿಯಿಂದ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿಭಾಗ ಸುಳ್ಯ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಜಾಲ್ಸೂರು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ,
10 ಚಿನ್ನದ ಪದಕ , 10 ಬೆಳ್ಳಿಯ ಪದಕ ಹಾಗು 8 ಕಂಚಿನ ಪದಕವನ್ನು ಪಡೆದಿರುತ್ತಾರೆ .
ಹಾಗು 14 ವಯೋಮಾನದ ಬಾಲಕರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ ತಣ್ಣದಾಗಿಸಿಕೊಂಡಿದೆ. ತರಬೇತುದಾರರಿಗೆ ಹಾಗೂ ವಿಜೇತ ಕ್ರೀಡಾಪಟುಗಳಿಗೆ,ಶಾಲಾ ಆಡಳಿತ ಮಂಡಳಿ, ಮುಖ್ಯೊಪಾಧ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.
























