ನೆಲ್ಯಾಡಿ : ಗ್ರಾಮೀಣ ಭಾಗದಲ್ಲಿ ಕಣ್ಣಿನ ಪೊರೆ ಸಮಸ್ಯೆಯಿಂದ ಬಳಲುತ್ತಾ ಇರುವವರಿಗೆ ಉಪಯೋಗವಾಗಲಿ ಎನ್ನುವ ಪ್ರಾಮಾಣಿಕವಾದ ಕಳಕಳಿಯಿಂದ ಈ ಶಿಬಿರವನ್ನು ಆಯೋಜಿಸಿದ್ದೇವೆ ಈ ಶಿಬಿರದಲ್ಲಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಉಚಿತವಾಗಿ ಜಿಲ್ಲಾ ವೆನ್ ಲಾಕ್ ಆಸ್ಪತ್ರೆಯಲ್ಲಿ ಕೆಎಂಸಿಯ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಪೊರೆ ಶಸ್ತ್ರ ಚಿಕಿತ್ಸೆಯನ್ನು ನಡೆಸಿ, ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ ಎಂದು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ ಶಿಶಿರ ಉದ್ಘಾಟನಾ ಮಾತುಗಳಾಡಿದರು.

ಅವರು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಆಲಂಕಾರು ದುಗಾರ್ಂಬಾ, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನೆಲ್ಯಾಡಿ ಲೀಜಿಯನ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ ಇದರ ಆಶ್ರಯದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್ಹಾಕ್ ಆಸ್ಪತ್ರೆ ಮಂಗಳೂರು, ಸಂಚಾರಿ ನೇತ್ರ ಚಿಕಿತ್ಸಾ ಘಟಕ ಮಂಗಳೂರು ಇದರ ಸಹಯೋಗದೊಂದಿಗೆ, ತಜ್ಞ ವೈದ್ಯರಿಂದ ನಡೆಸಲ್ಪಟ್ಟ ಉಚಿತ ನೇತ್ರ ಚಿಕಿತ್ಸಾ ಹಾಗೂ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸಂಚಾರಿ ನೇತ್ರ ಚಿಕಿತ್ಸಾ ಘಟಕದ ಮುಖ್ಯಸ್ಥರಾದ ಶ್ರೀಮತಿ ಸುಮನ ರವರು ಶಿಬಿರದ ಬಗ್ಗೆ ಉಚಿತ ಪೊರೆ ಶಸ್ತ್ರ ಚಿಕಿತ್ಸೆಯ ಬಗ್ಗೆ ಜಿಲ್ಲಾಸ್ಪತ್ರೆಯ ವತಿಯಿಂದ ಉಚಿತ ಕನ್ನಡಕಗಳನ್ನು ನೀಡುವ ಬಗ್ಗೆ ವಿಸ್ತೃತವಾದ ಮಾಹಿತಿಯನ್ನು ನೀಡಿದರು ಅದರೊಂದಿಗೆ ಪೊರೆ ಶಸ್ತ್ರ ಚಿಕಿತ್ಸೆಯ ಸೌಲಭ್ಯವನ್ನು ಫಲಾನುಭವಿಗಳು ಯಾವುದೇ ಆತಂಕಗಳಿಗೆ ಎಡೆ ಮಾಡಿಕೊಡದೆ ಧೈರ್ಯದಿಂದ ಜಿಲ್ಲಾಸ್ಪತ್ರೆಯಲ್ಲಿ ಕೆಎಂಸಿಯ ಸಹಯೋಗದೊಂದಿಗೆ ಜಿಲ್ಲೆಯ ಹೆಸರಾಂತ ನೇತ್ರತಜ್ಞರಿಂದ ನಡೆಸಲ್ಪಡುವ ಪೊರೆ ಶಸ್ತ್ರ ಚಿಕಿತ್ಸೆ ಯ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು
ಶಿಬಿರದ ಸಂಘಟಕರು ನೆಲ್ಯಾಡಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜಿಯನ್ ನ ಅಧ್ಯಕ್ಷರಾದ ಸೀನಿಯರ್ ಪಿಪಿಎಫ್ ಪ್ರಕಾಶ್ ಕೆ ವೈ ರವರು ಮಾತನಾಡಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸಂಸ್ಥೆಯ ಮೂಲಕ ಕಳೆದ ಅನೇಕ ವರ್ಷಗಳಿಂದ ನೆಲ್ಯಾಡಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆಶಕ್ತರಿಗೆ ಸಹಾಯ ಹಸ್ತ ಮತ್ತು ಉಚಿತ ಆರೋಗ್ಯ ಮತ್ತು ನೇತ್ರ ಚಿಕಿತ್ಸಾ ಶಿಬಿರ ಗಳನ್ನು ಹಮ್ಮಿಕೊಂಡು ಸೇವಾ ಚಟುವಟಿಕೆಗಳನ್ನು ಮಾಡುತ್ತಾ ಬಂದಿದ್ದೇವೆ ಇವತ್ತಿನ ಈ ಶಿಬಿರದಲ್ಲಿ ಸೇರಿದಂತ ನೂರಾರು ಮಂದಿಯ ಭಾಗವಹಿಸುವಿಕೆ ನಾವು ಮಾಡಿದ ಈ ಶಿಬಿರದಲ್ಲಿ ನಮಗೆ ಧನ್ಯತಾಭಾವ ಮೂಡಿಬಂದಿದೆ ಶಿಬಿರದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವ ಬಗ್ಗೆ ವಿನಂತಿಸಿದರು
ಶಿಬಿರದ ಅಧ್ಯಕ್ಷತೆಯನ್ನು ವಹಿಸಿದ ಲಯನ್ಸ್ ಕ್ಲಬ್ ಅಲಂಕಾರ್ ದುರ್ಗಾಂಬಾ ಇದರ ಅಧ್ಯಕ್ಷರಾದ ಶ್ರೀ ಲ ಪದ್ಮಪ ಗೌಡ ಮಾತನಾಡಿ ಸಾಮಾಜಿಕ ಸೇವಾ ಸಂಸ್ಥೆಗಳು ಸೇವೆಯನ್ನೇ ಗುರಿಯಾಗಿಟ್ಟುಕೊಂಡು ಜನಪರ ಕಾಳಜಿಯಿಂದ ಇಂತಹ ಶಿಬಿರಗಳನ್ನು ನಡೆಸಿದರೆ ಸಂಸ್ಥೆಗಳ ಗೌರವ ಹೆಚ್ಚಾಗುತ್ತದೆ ಜನರಲ್ಲಿ ನಂಬಿಕೆಯು ಉಳಿಯುತ್ತದೆ ಈ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಅನೇಕ ಜನಪರ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅತ್ಯುತ್ತಮ ಸೇವೆಯನ್ನು ಮಾಡುತ್ತಾ ಬಂದಿದೆ ಇವತ್ತಿನ ಈ ಶಿಬಿರದಲ್ಲಿ ಸೇರಿದಂತಹ ಜನರೇ ಈ ಶಿಬಿರದ ಯಶಸ್ಸಿಗೆ ಸಾಕ್ಷಿಯಾಗಿದ್ದಾರೆ ಎಂದರು.
ವೇದಿಕೆಯಲ್ಲಿ ನೆಲ್ಯಾಡಿ ಗ್ರಾಪಂ ಆಧ್ಯಕ್ಷ ಸಲಾಂ ಬಿಲಾಲ್, ನೆಲ್ಯಾಡಿ ಗ್ರಾಪಂ ಸದಸ್ಯೆ ಉಷಾ ಜೋಯ್, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನೆಲ್ಯಾಡಿ ಲೀಜಿಯನ್ ಅಧ್ಯಕ್ಷ ಸೀನಿಯರ್ ಪಿಪಿಎಫ್ ಪ್ರಕಾಶ್ ಕೆ ವೈ,, ಬಂಟರ ಸಂಘ ಪುತ್ತೂರು ತಾಲೂಕು ಇದರ ಪ್ರಧಾನ ಕಾರ್ಯದರ್ಶಿ ಶ್ರೀ ನಿತ್ಯಾನಂದ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕರಾದ ಶ್ರೀ ಆನಂದ ಡಿ.ಬಿ. ಉಪಸ್ಥಿತರಿದ್ದು ಶುಭ ಹಾರೈಸಿದರು.
ಪುತ್ತೂರು ತಾಲೂಕಿನ ತಾಲೂಕು ವೈದ್ಯಾಧಿಕಾರಿಗಳಾದ ಶ್ರೀ ದೀಪಕ್ ರೈ ರವರು ಹಾಗೂ ಉಪ್ಪಿನಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಕೃಷ್ಣಾನಂದ ರವರು ಶಿಬಿರಕ್ಕೆ ಭೇಟಿ ನೀಡಿ ಸಂತಸ ವ್ಯಕ್ತಪಡಿಸಿದರು
ಕಾರ್ಯಕ್ರಮದಲ್ಲಿ ಸುಮಾರು 225 ಕ್ಕೂ ಹೆಚ್ಚು ಜನರರು ಆಗಮಿಸಿದರು. 182 ಜನರಿಗೆ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಯಿತು. ಸುಮಾರು 10 ಮಂದಿ ಕಣ್ಣಿನ ಪೊರೆ ಶಸ್ತ್ರಕ್ರಿಯೆಗೆ ಆಯ್ಕೆಗೊಂಡಿರುತ್ತಾರೆ.
59ನೇ ನೇತ್ರ ಚಿಕಿತ್ಸಾ ಶಿಬಿರದ ಸಂಘಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಶ್ರೀ ಗಂಗಾಧರ ಶೆಟ್ಟಿ ಹೊಸಮನೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಾಮಾಜಿಕ ಮುಖಂಡರಾದ ಶ್ರೀ ವಾಸುದೇವ ಗೌಡ ರವರು ವಂದನಾರ್ಪಣೆ ಗೈದರು. ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಶಿಬಿರದ ಯಶಸ್ಸಿಗೆ ಸಹಕರಿಸಿದರು.
























