ರಾಜ್ಯ ಬಿಜೆಪಿ ನಾಯಕರಿಗೆ ಆರ್ಎಸ್ಎಸ್ ನಾಯಕರು ಕ್ಲಾಸ್ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆರ್ಎಸ್ಎಸ್ ಚಿಂತನ ವರ್ಗದ ಸಭೆಯಲ್ಲಿ ಭಾಗಿಯಾಗಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಆರ್ಎಸ್ಎಸ್ ನಾಯಕರು ಕಿವಿಮಾತು ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ನಾಯಕರು ಸಂಘ ಪರಿವಾರ ಬಗ್ಗೆ ನಕಾರಾತ್ಮಕವಾಗಿ ಚಿತ್ರಿಸುತ್ತಿದ್ದಾರೆ. ಕಾಂಗ್ರೆಸ್ನವ್ರು ಸಂಘದ ಬಗ್ಗೆ ಕೆಟ್ಟ ನೆರೇಟಿವ್ ಸೃಷ್ಟಿಸ್ತಿದ್ದಾರೆ. ನೀವು ಈ ಬಗ್ಗೆ ಉದ್ವೇಗದ ಹೇಳಿಕೆಗಳನ್ನು ಕೊಡುವ ಕೆಲಸ ಮಾಡಬೇಡಿ. ಕಾಂಗ್ರೆಸ್ ನಾಯಕರು ಬೀಸಿರುವ ಈ ಜಾಲದಲ್ಲಿ ಸಿಕ್ಕಿಬೀಳಬೇಡಿ ಅಂತ ಕಿವಿಮಾತು ಹೇಳಿದ್ದಾರಂತೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷಗಳ ಇತಿಹಾಸ ಇದೆ, ಇಂಥ ಎಷ್ಟೋ ಸಂದರ್ಭಗಳನ್ನು ಸಂಘ ಎದುರಿಸಿದೆ, ಮೆಟ್ಟಿ ನಿಂತಿದೆ. ಮೂರು ಸಲ ಸಂಘ ನಿಷೇಧ ಮಾಡೋ ಅವರ ಪ್ರಯತ್ನಗಳೇ ವಿಫಲ ಆಗಿದೆ. ಈಗ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸಂಘದ ವಿಚಾರ ಕೆದಕಿದ್ದಾರೆ. ಈಗಿನ ಸವಾಲಿನ ಪರಿಸ್ಥಿತಿಯನ್ನೂ ಸಂಘ ಯಶಸ್ವಿಯಾಗಿ ಎದುರಿಸುತ್ತೆ, ಇದೆಲ್ಲ ತಾತ್ಕಾಲಿಕ ಎಂಬ ವಿಶ್ವಾಸದ ಮಾತುಗಳನ್ನಾಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನರೇಟಿವ್ ಸೆಟ್ ಮಾಡುವುದು, ಜನಾಭಿಪ್ರಾಯ ರೂಪಿಸುವುದು ಸಭೆಯ ಉದ್ದೇಶವಾಗಿದ್ದು, ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಬಗ್ಗೆ ಚರ್ಚೆ ನಡೆಯಿತು. ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಹೋರಾಟ ಬಗ್ಗೆಯೂ ಸಂಘದ ನಾಯಕರು ಅಸಮಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿ ನಾಯಕರು ಆತುರ ಪಡಬೇಡಿ, ತಕ್ಷಣದ ಪ್ರತಿಕ್ರಿಯೆಗಳನ್ನು ಕೊಡಬೇಡಿ. ಅದರ ಬದಲು ರಾಜ್ಯ ಸರ್ಕಾರದ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು ಜನರಿಗೆ ಮನವರಿಕೆ ಮಾಡಿಕೊಡಿ. ರಾಜ್ಯ ಕಾಂಗ್ರೆಸ್ ವಿರುದ್ಧ ರಾಜ್ಯದಲ್ಲಿ ಪರಿಣಾಮಕಾರಿ ಹೋರಾಟಗಳನ್ನು ಕೈಗೊಳ್ಳಿ ಅಂತ ಆರ್ಎಸ್ಎಸ್ ಸಭೆಯಲ್ಲಿ ಸಂಘದ ಮುಖಂಡರಿಂದ ಬಿಜೆಪಿ ನಾಯಕರಿಗೆ ನಿರ್ದೇಶನ ನೀಡಲಾಗಿದೆ.
ಇನ್ನು ಇಂದು ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಆರ್ಎಸ್ಎಸ್ ಚಿಂತನ ವರ್ಗದ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕದ ಆರ್ಎಸ್ಎಸ್ ಮುಖಂಡರು ಹಾಗೂ ಬಿಜೆಪಿ ನಾಯಕರು ಭಾಗಿಯಾಗಿದ್ದರು. ಆರ್ಎಸ್ಎಸ್ ಮುಖಂಡರಾದ ತಿಪ್ಪೇಸ್ವಾಮಿ, ರಘುನಂದನ್, ವಾದಿರಾಜ್ ಸೇರಿದಂತೆ ಹಲವರು ಭಾಹಿಯಾಗಿದ್ದರು.
ಇತ್ತ ಬಿಜೆಪಿ ನಾಯಕರಾದ ಆರ್ ಅಶೋಕ್, ಬಿವೈ ವಿಜಯೇಂದ್ರ, ಸಿಟಿ ರವಿ, ಛಲವಾದಿ ನಾರಾಯಣ ಸ್ವಾಮಿ, ಅಶ್ವತ್ಥ್ ನಾರಾಯಣ, ಮಾಜಿ ಸಂಸದ ಪ್ರತಾಪ್ ಸಿಂಹ, ಸಂಸದರಾದ ಬಸವರಾಜ್ ಬೊಮ್ಮಾಯಿ, ಬ್ರಿಜೇಶ್ ಚೌಟ, ಶಾಸಕ ಜನಾರ್ದನ ರೆಡ್ಡಿ, ಎನ್ ರವಿಕುಮಾರ್, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್ ಸಿರೋಯ, ಶಾಸಕ ಭರತ್ ಶೆಟ್ಟಿ, ಮಾಜಿ ಶಾಸಕ ಸಂಜಯ್ ಪಾಟೀಲ್ ಸೇರಿದಂತೆ ಹಲವು ಬಿಜೆಪಿ ಶಾಸಕರು, ಪರಿಷತ್ ಸದಸ್ಯರು, ಮಾಜಿ ಶಾಸಕರು ಭಾಗಿಯಾಗಿದ್ದರು.
								
								
															


                                









			








