ಪುತ್ತೂರು:ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ ಕೋಡಿಂಬಾಡಿ ಇವರು ನೇಮಕಗೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ತಳಮಟ್ಟದಿಂದ ಸಂಘಟನೆ ಕೆಲಸ ಕಾರ್ಯಗಳನ್ನು ಕಾರ್ಯರೂಪಕ್ಕೆ ತರುವ ಉದ್ಧೇಶದಿಂದ ಪಕ್ಷದ ಹಿರಿಯ ಮುಖಂಡರ ಹಾಗೂ ಶಾಸಕ ಅಶೋಕ್ ಕುಮಾರ್ ರೈರವರ ಸೂಚನೆಯ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜಿಸಲಾಗಿದೆ ಎಂದು ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ತೌಸಿಫ್ ಯು.ಟಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.























