ಪುತ್ತೂರು: ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಬೀದಿನಾಯಿಗಳ ಉಪಟಳ ಅಧಿಕವಾಗಿದ್ದು ಇದಕ್ಕೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ಪುತ್ತೂರುಶಾಸಕ ಅಶೋಕ್ ರೈ ಅವರು ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆ ವಹಿಸಿದ್ದರು.
ಪುತ್ತೂರು ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ ಅಧಿಕವಾಗಿದೆ. ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ವ್ಯಕ್ತಿಯೋರ್ಚರು ನಾಯಿ ಕಚ್ಚಿ ಸಾವನ್ನಪ್ಪಿದ್ದಾರೆ ಇದು ಎಲ್ಲೂ ಮರುಕಳಿಸಬಾರದು. ಶಾಲೆ ಬಿಟ್ಟು ತೆರಳುವ ಸಂದರ್ಭದಲ್ಲಿ ನಾಯಿಗಳ ಗುಂಪು ಓಡಿಸಿದ್ದಲ್ಲಿ ಅಪಘಾತಗಳು ಉಂಟಾಗುವ ಸಾಧ್ಯತೆ ಇದೆ. ಪುತ್ತೂರಿನಲ್ಲಿ ಎಲ್ಲೆಂದರಲ್ಲಿ ನಾಯಿಗೆ ಆಹಾರ ಹಾಕುತ್ತಿರುವ ಕೆಲವು ವ್ಯಕ್ತಿಗಳಿಂದಾಗಿ ನಾಯಿಗಳು ಒಂದೆಡೆ ಗುಂಪು ಸೇರುತ್ತಿದೆ. ಸುಪ್ರಿಂ ಆದೇಶ ಪ್ರಕಾರ ನಾಯಿಗಳನ್ನು ಶೆಲ್ ನಲ್ಲಿ ಹಾಕಿ ಅಲ್ಲಿ ಆಹಾರ ಹಾಕುವ ವ್ಯವಸ್ಥೆಯನ್ನು ಕೂಡಲೇ ಜಾರಿ ಮಾಡಬೇಕು.
ಹುಚ್ಚು ನಾಯಿ ಕಡಿತಕ್ಕೊಳಗಾದಲ್ಲಿ ಅದರಿಂದ ಆಗುವ ಸಾವು ನೋವುಗಳನ್ನು ಸಹಿಸಲು ಯಾರಿಂದಲೂ ಸಾಧ್ಯವಿಲ್ಲ. ಜಿಲ್ಲಾಡಳಿತ ತಕ್ಷಣ ಎಚ್ಚೆತ್ತು ಬೀದಿ ನಾಯಿಗಳ ಉಪಟಳಕ್ಕೆ ಬ್ರೇಕ್ ಹಾಕಬೇಕು ಎಂದು ಸಭೆಗೆ ತಿಳಿಸಿದರು.





















