ಪುತ್ತೂರು: ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಪ್ರಯುಕ್ತ ದೇಶದ್ಯಾಂತ ಬಿ.ಜೆ.ಪಿ ವತಿಯಿಂದ ಅಟಲ್ ವಿರಾಸತ್ ವಿಶೇಷ ಕಾರ್ಯಕ್ರಮವನ್ನು ಪಕ್ಷ ಆಯೋಜಿಸಿದ್ದು, ದ.ಕ ಜಿಲ್ಲಾ ಬಿ.ಜೆ.ಪಿ ವತಿಯಿಂದ ಪುತ್ತೂರು ವೆಂಕಟರಮಣ ದೇವಸ್ಥಾನದ ಮೈದಾನದಲ್ಲಿ ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪುತ್ತೂರಿಗೆ ಆಗಮಿಸಿದ್ದು, ಪ್ರಾರಂಭದಲ್ಲಿ ಹತ್ತೂರ ಒಡೆಯ ಪುತ್ತೂರಿನ ಮಹಾಲಿಂಗೇಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿ ತುಪ್ಪ ದೀಪ ಬೆಳಗಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ,ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಸಂಸದ ಕ್ಯಾ. ಬ್ರಿಜೇಶ್ ಚೌಟ,ಶಾಸಕ ಹರೀಶ್ ಪೂಂಜ ತುಪ್ಪದ ದೀಪ ಬೆಳಗಿಸಿ, ಎಳ್ಳೆಣ್ಣೆ ಸಮರ್ಪಣೆ ಮಾಡಿದರು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಸಹಿತ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಸಹಿತ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.