ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಪ್ರತೀಕ್ (23) ಎಂದು ಗುರುತಿಸಲಾಗಿದೆ
ಪ್ರತೀಕ್ ರವರ ತಂದೆ ತಾಯಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ. ಪರಿಶೀಲನೆ ನಡೆಸಿದ್ಧಾರೆ.























