ಹೊಸದಿಲ್ಲಿ: ಪಾಕಿಸ್ತಾನದ ಮಾಜಿ ಸಚಿವರೊಬ್ಬರ ಸಾಮಾಜಿಕ ಮಾಧ್ಯಮ ಪೋಸ್ಟ್ ಒಂದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೊಸ ಸಂಘರ್ಷಕ್ಕೆ ನಾಂದಿ ಹಾಡಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಭಾಷಣದ ತುಣುಕೊಂದನ್ನು ಹಂಚಿಕೊಂಡಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಂಪುಟದಲ್ಲಿದ್ದ ನಾಯಕ ಫವಾದ್ ಅಹ್ಮದ್ ಹುಸೇನ್ ಚೌಧರಿ, ‘ರಾಹುಲ್ ಗಾಂಧಿ ಬೆಂಕಿ’ ಎಂದು ಕ್ಯಾಪ್ಷನ್ ನೀಡುವ
ಈ ಪೋಸ್ಟ್ ಅನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಬಿಜೆಪಿ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ, “ಇಮ್ರಾನ್ ಖಾನ್ ಸಂಪುಟದಲ್ಲಿ ಮಾಹಿತಿ ಹಾಗೂ ಪ್ರಸಾರ ಖಾತೆ ಸಚಿವರಾಗಿದ್ದ ಚೌಧರಿ ಫವಾದ್ ಹುಸೇನ್ ಅವರು ರಾಹುಲ್ ಗಾಂಧಿ ಪರ ಪ್ರಚಾರ ನಡೆಸುತ್ತಿದ್ದಾರೆ. ಪಾಕಿಸ್ತಾನದಲ್ಲಿ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಯೋಚಿಸುತ್ತಿದೆಯೇ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಮುಸ್ಲಿಂ ಲೀಗ್‌ನ ಚಿಂತನೆಗಳನ್ನು ಅನುಮೋದಿಸುವಂತಹ ಪ್ರಣಾಳಿಕೆಯನ್ನು ಮುದ್ರಿಸುವುದರಿಂದ, ಗಡಿಯಾಚೆಗೂ ಪಾಕಿಸ್ತಾನದ ಜತೆಗಿನ ಕಾಂಗ್ರೆಸ್ ಸಖ್ಯ ಇದಕ್ಕಿಂತ ಹೆಚ್ಚು ಸ್ಪಷ್ಟವಾಗಲು ಸಾಧ್ಯವಿಲ್ಲ” ಎಂದು ಮಾಳವೀಯ ಕಟುವಾಗಿ ಟೀಕಿಸಿದ್ದಾರೆ.
ರಾಹುಲ್ ಆನ್ ಫೈರ್’ ಎಂದು ಫವಾದ್ ಹುಸೇನ್ ಬರೆದಿರುವ ಸಾಲು ಹಾಗೂ ವಿಡಿಯೋವನ್ನು ಮಾಳವೀಯ ಹಂಚಿಕೊಂಡಿದ್ದಾರೆ.
ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸುವ ವಿಡಿಯೋವನ್ನು ಪಾಕಿಸ್ತಾನದ ಮಾಜಿ ಸಚಿವ ಹುಸೇನ್ ಹಂಚಿಕೊಂಡಿದ್ದರು. ಈ ವಿಡಿಯೋದಲ್ಲಿ ರಾಹುಲ್ ಗಾಂಧಿ ಅವರು ಅಯೋಧ್ಯಾದ ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ಅತಿಥಿಗಳನ್ನು ಆಹ್ವಾನಿಸಿದ್ದರ ಕುರಿತು ಸಹ ಬಿಜೆಪಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು.