ಕಾಣಿಯೂರು: ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ನಡೆಯಿತು,
ಮುಗ್ಧ ಮನಸ್ಸಿನ ಚಿಕ್ಕ ಮಕ್ಕಳಲ್ಲಿ ಇರುವಂತಹ ಪ್ರತಿಭೆಯನ್ನು ಕಲಿಕೆಯ ಜೊತೆಗೆ ಗುರುತಿಸುವ ಕಾರ್ಯವನ್ನು ಬಾಲಮೇಳದ ಮುಖಾಂತರ ಮಾಡಿದಾಗ ಭವಿಷ್ಯದ ದಿನಗಳಲ್ಲಿ ಮಕ್ಕಳ ಪ್ರತಿಭೆಗಳ ಅನಾವರಣಕ್ಕೆ ಪೂರಕವಾಗುತ್ತದೆ.ಊರಿನ ಜನರು ತಮ್ಮದೇ ಆದ ಕೊಡುಗೆಗಳನ್ನು ನೀಡುವ ಮೂಲಕ ಅಂಗನವಾಡಿ ಕೇಂದ್ರಕ್ಕೆ ಸಹಕಾರ ನೀಡಿದಾಗ ಮಕ್ಕಳ ಬೆಳವಣಿಗೆಗೆ ಸಹಕಾರ ದೊರೆತು ಮುಂದಿನ ದಿನಗಳಲ್ಲಿ ಊರಿನ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಅಬೀರ ಹೇಳಿದರು. ಅವರು ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಬೀರ ಅಂಗನವಾಡಿ ಕೇಂದ್ರದಲ್ಲಿ ನಡೆದ ಬಾಲಮೇಳ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ನಿತ್ಯ ಕೆಳಗಿನ ಮನೆ ವಹಿಸಿದ್ದರು.ವೇದಿಕೆಯಲ್ಲಿ ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರಾದ ಗೌರಿ ಮಾದೋಡಿ, ಅಮೈ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸುಶ್ಮಿತಾ ಅಬೀರ, ಅಂಗನವಾಡಿ ಕೇಂದ್ರದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದಿನೇಶ್ ಅಬೀರ,ಕೊಡಿಮಾರು ಗೆಳೆಯರ ಬಳಗದ ಅಧ್ಯಕ್ಷರಾದ ಬಾಲಚಂದ್ರ ಅಬೀರ, ಕಾವ್ಯ ಕಂಡೂರು,ಅವ್ವಮ್ಮ ಅಜಿರಂಗಳ ಉಪಸ್ಥಿತರಿದ್ದರು.ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ನಿತ್ಯ ಕೆಳಗಿನ ಮನೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಇದೇ ವೇಳೆ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.ಅಂಗನವಾಡಿ ಕಾರ್ಯಕರ್ತೆ ಬೇಬಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಸಹಾಯಕಿ ವಾರಿಜ ಸಹಕರಿಸಿದರು.ಸ್ತ್ರೀ ಶಕ್ತಿ ಸಂಘಗಳ ಸದಸ್ಯರು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸುವರು.























